ಆದಿಕಾಂಡ 46:34 - ಕನ್ನಡ ಸತ್ಯವೇದವು J.V. (BSI)34 ನೀವು - ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಅನ್ನಿರಿ. ಪಶುಪಾಲಕರು ಐಗುಪ್ತ್ಯರಿಗೆ ಅಸಹ್ಯವಾಗಿರುವದರಿಂದ ಗೋಷೆನ್‍ಸೀಮೆಯನ್ನು ನಿಮ್ಮ ನಿವಾಸಕ್ಕೆ ನೇವಿುಸುವನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 “ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು. ಅಧ್ಯಾಯವನ್ನು ನೋಡಿ |