Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:4 - ಕನ್ನಡ ಸತ್ಯವೇದವು J.V. (BSI)

4 ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ತಿರಿಗಿ ಕರೆದುಕೊಂಡು ಬರುವೆನು; [ನಿನ್ನ ಅವಸಾನಕಾಲದಲ್ಲಿ] ಯೋಸೇಫನು ನಿನ್ನ ಕಣ್ಣುಗಳ ಮೇಲೆ ಕೈಯಿಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನೇ ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಅಲ್ಲಿಂದ ನಿನ್ನನ್ನು ನಿಶ್ಚಯವಾಗಿ ವಾಪಸ್ಸು ಕರೆದುಕೊಂಡು ಬರುವೆನು. ನೀನು ಸಾಯುವ ಕಾಲದಲ್ಲಿ ಜೋಸೆಫನು ಹಾಜರಿದ್ದು ನಿನ್ನ ಕಣ್ಣುಗಳನ್ನು ಮುಚ್ಚುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಬಳಿಕ ನಾನೇ ನಿನ್ನನ್ನು ಮತ್ತೆ ಈಜಿಪ್ಟಿನಿಂದ ಕರೆದುಕೊಂಡು ಬರುವೆನು. ನೀನು ಈಜಿಪ್ಟಿನಲ್ಲಿ ಮರಣ ಹೊಂದಿದರೂ ಯೋಸೇಫನು ನಿನ್ನ ಸಂಗಡವಿರುವನು. ನೀನು ಸತ್ತಾಗ ಅವನು ತನ್ನ ಕೈಗಳಿಂದ ನಿನ್ನ ಕಣ್ಣುಗಳನ್ನು ಮುಚ್ಚುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನೇ ನಿನ್ನ ಸಂಗಡ ಈಜಿಪ್ಟಿಗೆ ಹೋಗುವೆನು. ನಾನು ನಿಶ್ಚಯವಾಗಿ ನಿನ್ನನ್ನು ಕಾನಾನಿಗೆ ತಿರುಗಿ ಬರಮಾಡುವೆನು. ಯೋಸೇಫನು ನಿನ್ನ ಅಂತಿಮ ಕಾಲದಲ್ಲಿ ನೀನು ಕಣ್ಣುಮುಚ್ಚುವಾಗ ಇರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:4
10 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.


ಇಸ್ರಾಯೇಲನು ಯೋಸೇಫನಿಗೆ - ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ದೇಶಕ್ಕೆ ತಿರಿಗಿ ಬರಮಾಡುವನು.


ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.


ಅವನ ಶವವನ್ನು ಕಾನಾನ್‍ದೇಶಕ್ಕೆ ಹೊತ್ತುಕೊಂಡುಹೋಗಿ ಮಕ್ಪೇಲ ಎಂಬ ಬೈಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂವಿುಸಹಿತ ಸ್ವಕೀಯ ಶ್ಮಶಾನಭೂವಿುಯಾಗುವದಕ್ಕೆ ಕೊಂಡುಕೊಂಡಿದ್ದನು.


ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು