ಆದಿಕಾಂಡ 47:11 - ಕನ್ನಡ ಸತ್ಯವೇದವು J.V. (BSI)11 ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಸ್ಥಾನವನ್ನು ನೇವಿುಸಿ ಅದರೊಳಗೆ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವಾಸ್ತಿಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಫರೋಹನ ಅಪ್ಪಣೆಯ ಮೇರೆಗೆ ಜೋಸೆಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಈಜಿಪ್ಟಿನಲ್ಲಿ ವಾಸಸ್ಥಾನವನ್ನು ನೇಮಿಸಿ, ಅದರಲ್ಲಿ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸೊತ್ತನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೋಸೇಫನು ತನ್ನ ತಂದೆಗೂ, ತನ್ನ ಸಹೋದರರಿಗೂ ನಿವಾಸವನ್ನು ಕೊಟ್ಟು, ಫರೋಹನ ಅಪ್ಪಣೆಯ ಪ್ರಕಾರ, ಅವರಿಗೆ ಈಜಿಪ್ಟ್ ದೇಶದ ಉತ್ತಮವಾದ ರಮ್ಸೇಸ್ ಸೀಮೆಯ ಸ್ವತ್ತನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |