Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:12 - ಕನ್ನಡ ಸತ್ಯವೇದವು J.V. (BSI)

12 ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೋಸೇಫನು ತನ್ನ ತಂದೆಗೂ ತನ್ನ ಸಹೋದರರಿಗೂ ಮತ್ತು ಅಲ್ಲಿನ ಎಲ್ಲಾ ಜನರಿಗೂ ಬೇಕಾಗಿದ್ದ ಆಹಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೋಸೇಫನು ತನ್ನ ತಂದೆಯನ್ನೂ, ತನ್ನ ಸಹೋದರರನ್ನೂ, ತನ್ನ ತಂದೆಯ ಮನೆಯವರೆಲ್ಲರನ್ನೂ ಅವರ ಮಕ್ಕಳ ಲೆಕ್ಕದ ಪ್ರಕಾರ ಆಹಾರಕೊಟ್ಟು, ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:12
16 ತಿಳಿವುಗಳ ಹೋಲಿಕೆ  

ಈ ಬರಗಾಲ ತೀರುವದಕ್ಕೆ ಇನ್ನೂ ಐದು ವರುಷ ಹೋಗಬೇಕು; ಆದದರಿಂದ ನಿನಗೂ ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು ಹೇಳುತ್ತಾನೆಂಬದಾಗಿ ತಿಳಿಸಿರಿ.


ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕಡೆಯಾದವನೂ ಆಗಿದ್ದಾನೆ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ತಾಯಿಯು ತನ್ನ ಮಕ್ಕಳನ್ನು ಪೋಷಿಸುತ್ತಾಳೋ ಎಂಬಂತೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೆವು.


ಇವನು ನಿನ್ನನ್ನು ಉಜ್ಜೀವಿಸಮಾಡುವನು; ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ ಎಂದು ಹೇಳಿದರು.


ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಇರುವಿ.


ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ವಿುಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ, ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಜೀವನಕ್ಕಾಗುತ್ತದೆ ಎಂದು ಹೇಳಿದನು.


ಯೋಸೇಫನು ಐಗುಪ್ತದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.


ಆಗ ಯೋಸೇಫನು ಫರೋಹನ ಬಳಿಗೆ ಹೋಗಿ - ನನ್ನ ತಂದೆಯೂ ಅಣ್ಣತಮ್ಮಂದಿರೂ ದನಕುರಿಗಳನ್ನೂ ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿದ್ದಾರೆಂದು ಹೇಳಿ


ಆದದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ; ನಾನು ನಿಮ್ಮನ್ನೂ ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ನಿಮ್ಮ ಜನವು ಭೂವಿುಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಬಹುಜನವಾಗುವಂತೆಯೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.


ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು; ನೀನೂ ನಿನ್ನ ಮಕ್ಕಳೂ ಮೊಮ್ಮಕ್ಕಳೂ ಕುರಿ ದನ ಮೊದಲಾದ ಸ್ವಾಸ್ತ್ಯಸಹಿತರಾಗಿ ನನ್ನ ಬಳಿಯಲ್ಲೇ ಇರಬಹುದು;


ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣಪಾತ್ರೆಗಳನ್ನು ಅಂದರೆ ತಂದೆಯ ಸಂತಾನ ಸಂತತಿಯಾದ ಅವನ ವಂಶದ ಭಾರವನ್ನೆಲ್ಲಾ ಅವನಿಗೆ ತಗಲುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು