ಆದಿಕಾಂಡ 47:15 - ಕನ್ನಡ ಸತ್ಯವೇದವು J.V. (BSI)15 ಐಗುಪ್ತದೇಶದಲ್ಲಿಯೂ ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು - ನಮ್ಮ ಹಣವು ಮುಗಿದು ಹೋಯಿತು; ನೀನು [ಧರ್ಮವಾಗಿಯೇ] ಆಹಾರಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈಜಿಪ್ಟಿನ ಹಾಗೂ ಕಾನಾನಿನ ಹಣವೆಲ್ಲ ಮುಗಿದುಹೋದಾಗ ಈಜಿಪ್ಟಿನವರು ಜೋಸೆಫನ ಬಳಿಗೆ ಬಂದು, “ನಾವೇಕೆ ನಿಮ್ಮ ಕಣ್ಮುಂದೆ ಸಾಯಬೇಕು? ನಮಗೆ ಆಹಾರ ಕೊಡಿ, ನಮ್ಮ ಹಣ ಮುಗಿದುಹೋಯಿತು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸ್ವಲ್ಪ ಸಮಯದ ನಂತರ, ಈಜಿಪ್ಟ್ ಮತ್ತು ಕಾನಾನ್ ದೇಶಗಳಲ್ಲಿದ್ದ ಜನರಲ್ಲಿ ಹಣವು ಉಳಿದಿರಲಿಲ್ಲ. ಆದ್ದರಿಂದ ಈಜಿಪ್ಟಿನ ಜನರು ಯೋಸೇಫನ ಬಳಿಗೆ ಹೋಗಿ, “ದಯವಿಟ್ಟು ನಮಗೆ ಆಹಾರವನ್ನು ಕೊಡು. ನಮ್ಮ ಹಣವೆಲ್ಲ ಮುಗಿದುಹೋಗಿದೆ. ನಾವು ಊಟ ಮಾಡದಿದ್ದರೆ ನಿನ್ನೆದುರಿನಲ್ಲೇ ಸಾಯುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಹಣವು ಮುಗಿದಾಗ, ಈಜಿಪ್ಟಿನವರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮಗೆ ಆಹಾರವನ್ನು ಕೊಡು, ನಾವು ನಿನ್ನ ಮುಂದೆ ಏಕೆ ಸಾಯಬೇಕು? ಏಕೆಂದರೆ ಹಣವೆಲ್ಲಾ ತೀರಿತು,” ಎಂದರು. ಅಧ್ಯಾಯವನ್ನು ನೋಡಿ |