ಆದಿಕಾಂಡ 47:17 - ಕನ್ನಡ ಸತ್ಯವೇದವು J.V. (BSI)17 ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತರಲು ಅವನು ಅವರ ಕುದುರೆಗಳನ್ನೂ ಕುರಿದನಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಡಿಸಿದನು. ಆ ವರುಷದಲ್ಲಿ ಅವರ ದನಕುರಿಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ತಮ್ಮ ಪಶುಪ್ರಾಣಿಗಳನ್ನು ಜೋಸೆಫನ ಬಳಿಗೆ ತಂದರು. ಅವನು ಅವರ ಕುದುರೆಗಳನ್ನೂ ದನಕುರಿಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯ ಕೊಡಿಸಿದನು. ಹೀಗೆ ಆ ವರ್ಷ ಅವರ ಪಶುಪ್ರಾಣಿಗಳನ್ನು ಪಡೆದು, ಧಾನ್ಯಕೊಟ್ಟು ಅವರನ್ನು ಕಾಪಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ಜನರು ತಮ್ಮ ದನಕರುಗಳನ್ನೂ ಕುದುರೆಗಳನ್ನೂ ಇತರ ಎಲ್ಲಾ ಪಶುಗಳನ್ನೂ ಕೊಟ್ಟು ಆಹಾರವನ್ನು ಕೊಂಡುಕೊಂಡರು. ಆ ವರ್ಷ ಯೋಸೇಫನು ಅವರಿಗೆ ಆಹಾರವನ್ನು ಕೊಟ್ಟು ಅವರ ಪಶುಗಳನ್ನು ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರು ತಮ್ಮ ಪಶುಗಳನ್ನೆಲ್ಲಾ ಯೋಸೇಫನ ಬಳಿಗೆ ತಂದರು. ಅವುಗಳ ಬದಲಾಗಿ ಅವನು ಆಹಾರ ಧಾನ್ಯ ಕೊಟ್ಟನು. ಅವರ ಕುದುರೆಗಳನ್ನೂ ಕುರಿಗಳನ್ನೂ ಆಡುಗಳನ್ನೂ ದನಗಳನ್ನೂ ಕತ್ತೆಗಳನ್ನೂ ಬದಲಾಗಿ ತೆಗೆದುಕೊಂಡನು. ಆ ವರ್ಷ ಅವರು ಆಹಾರಕ್ಕಾಗಿ ತಮ್ಮ ಎಲ್ಲಾ ಪಶುಪ್ರಾಣಿಗಳನ್ನು ಮಾರಿಕೊಂಡರು. ಅಧ್ಯಾಯವನ್ನು ನೋಡಿ |