Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:18 - ಕನ್ನಡ ಸತ್ಯವೇದವು J.V. (BSI)

18 ಆ ವರುಷ ಕಳೆದನಂತರ ಅವರು ಎರಡನೆಯ ವರುಷದಲ್ಲಿ ಅವನ ಬಳಿಗೆ ಬಂದು - ನಮ್ಮ ಹಣವೆಲ್ಲಾ ವೆಚ್ಚವಾಗಿ ಹೋಗಿದೆ; ನಮ್ಮ ಕುರಿದನಗಳು ಸ್ವಾವಿುಯ ವಶವಾದವು; ಹೀಗಿರುವದರಿಂದ ನಮ್ಮ ಭೂವಿುಯೂ ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾವಿುಗೆ ಮರೆಮಾಜದೆ ತಿಳಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ವರ್ಷ ಕಳೆದು ಮಾರನೆಯ ವರ್ಷದಲ್ಲಿ ಅವರು ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲ ವೆಚ್ಚವಾಯಿತು. ನಮ್ಮ ಪಶುಪ್ರಾಣಿಗಳು ದಣಿಯ ವಶವಾದುವು; ಇನ್ನು ಉಳಿದಿರುವುದು ನಮ್ಮ ಭೂಮಿ ಮತ್ತು ದೇಹಗಳೇ ಹೊರತು ಬೇರೇನೂ ಇಲ್ಲ; ದಣಿಗೆ ಮುಚ್ಚುಮರೆಯಿಲ್ಲದೆ ತಿಳಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ವರ್ಷವಾದ ಮೇಲೆ ಮಾರನೆಯ ವರ್ಷದಲ್ಲಿ, ಅವರು ಅವನ ಬಳಿಗೆ ಬಂದು ಅವನಿಗೆ, “ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವುದರಿಂದ, ನಮ್ಮ ಶರೀರಗಳೂ, ನಮ್ಮ ಭೂಮಿಯೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬುದನ್ನು ನಮ್ಮ ಒಡೆಯನಿಗೆ ಮರೆಮಾಡದೆ ತಿಳಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:18
4 ತಿಳಿವುಗಳ ಹೋಲಿಕೆ  

ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ ಎಂದು ಅರಿಕೆಮಾಡಿದನು.


ಒಂದು ದಿವಸ ಇಸ್ರಾಯೇಲ್ಯರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ ಒಬ್ಬ ಸ್ತ್ರೀಯು - ಅರಸೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು ಎಂದು ಮೊರೆಯಿಟ್ಟಳು.


ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತರಲು ಅವನು ಅವರ ಕುದುರೆಗಳನ್ನೂ ಕುರಿದನಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಡಿಸಿದನು. ಆ ವರುಷದಲ್ಲಿ ಅವರ ದನಕುರಿಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.


ನಿನ್ನ ಕಣ್ಣೆದುರಿಗೆ ನಾವು ಯಾಕೆ ಸಾಯಬೇಕು; ನಮ್ಮ ಭೂವಿುಯು ಯಾಕೆ ಹಾಳಾಗಬೇಕು. ನಮ್ಮನ್ನೂ ನಮ್ಮ ಭೂವಿುಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂವಿುಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂವಿುಯು ಹಾಳು ಬೀಳಬಾರದಿದ್ದರೆ ನೀನು ಬೀಜವನ್ನು ಕೊಡಬೇಕೆಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು