ಆದಿಕಾಂಡ 47:22 - ಕನ್ನಡ ಸತ್ಯವೇದವು J.V. (BSI)22 ವೈದಿಕರ ಭೂವಿುಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ವೈದಿಕರಿಗೆ ಫರೋಹನ ಕಡೆಯಿಂದ ಆಯವು ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಆಯದಿಂದ ಜೀವನ ಮಾಡುತ್ತಿದ್ದರು; ಆದದರಿಂದ ತಮ್ಮ ಭೂವಿುಯನ್ನು ಮಾರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅರ್ಚಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಅವರಿಗೆ ಫರೋಹನಿಂದ ಭತ್ಯ ದೊರಕುತ್ತಿತ್ತು. ಆ ಭತ್ಯದಿಂದ ಜೀವನ ನಡೆಸುತ್ತಿದ್ದ ಆ ಅರ್ಚಕರು ತಮ್ಮ ಭೂಮಿಯನ್ನು ಮಾರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಆ ಹಣದಿಂದ ಆಹಾರವನ್ನು ಕೊಂಡುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯಾಜಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಫರೋಹನು ಯಾಜಕರಿಗೆ ಭತ್ಯೆಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು, ಅವರು ಊಟಮಾಡುತ್ತಿದ್ದರು. ಆದ್ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ. ಅಧ್ಯಾಯವನ್ನು ನೋಡಿ |