Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:23 - ಕನ್ನಡ ಸತ್ಯವೇದವು J.V. (BSI)

23 ಯೋಸೇಫನು ಪ್ರಜೆಗಳಿಗೆ - ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂವಿುಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂವಿುಯಲ್ಲಿ ಬಿತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೋಸೇಫನು ಪ್ರಜೆಗಳಿಗೆ, “ನಾನು ಈ ಹೊತ್ತು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗೋಸ್ಕರ ಕೊಂಡುಕೊಂಡಿದ್ದೇನೆ ಎಂದು ತಿಳಿದುಕೊಳ್ಳಿರಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ; ಭೂಮಿಯನ್ನು ಬಿತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜೋಸೆಫನು ಪ್ರಜೆಗಳಿಗೆ, “ನಾನು ಈ ದಿನ ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆಂದು ತಿಳಿದುಕೊಳ್ಳಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ. ಭೂಮಿಯಲ್ಲಿ ಬಿತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋಸೇಫನು ಜನರಿಗೆ, “ಈಗ ನಾನು ನಿಮ್ಮನ್ನೂ ನಿಮ್ಮ ಜಮೀನನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಆದ್ದರಿಂದ ನಾನು ನಿಮಗೆ ಬೀಜವನ್ನು ಕೊಡುತ್ತೇನೆ. ನೀವು ನಿಮ್ಮ ಜಮೀನುಗಳಲ್ಲಿ ಬಿತ್ತನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೋಸೇಫನು ಜನರಿಗೆ, “ಇಂದು ನಿಮ್ಮನ್ನೂ, ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜ ಬಿತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:23
15 ತಿಳಿವುಗಳ ಹೋಲಿಕೆ  

ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಆಹಾರವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?


ಮಳೆಯೂ ಹಿಮವೂ ಆಕಾಶದಿಂದ ಬಿದ್ದು ಭೂವಿುಯನ್ನು ತೋಯಿಸಿ ಹಸಿರುಗೊಳಿಸಿ ಫಲಿಸುವಂತೆ ಮಾಡಿ ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವದಿಲ್ಲವೋ


ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ.


ಬಡವರಿಗೆ ಬಂಜರು ಭೂವಿುಯೂ ಬಹು ಬೆಳೆಯನ್ನೀಯುವದು; ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.


ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು; ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.


ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ; ಮಾರುವವನ ತಲೆಯ ಮೇಲೆ ಆಶೀರ್ವಾದ.


ದಯಾಳುವಾಗಿ ಧನಸಹಾಯಮಾಡುವವನೂ ತನ್ನ ಕಾರ್ಯಗಳನ್ನು ನೀತಿಯಿಂದ ನಡಿಸುವವನೂ ಭಾಗ್ಯವಂತನು.


ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ದೇಶಕ್ಕೆ ಬರಬಂದು ಎರಡು ವರುಷವಾಗಿದೆಯಷ್ಟೆ; ಇನ್ನೂ ಐದು ವರುಷಗಳ ಪರ್ಯಂತರ ಬಿತ್ತುವದಕ್ಕಾಗಲಿ ಕೊಯ್ಯುವದಕ್ಕಾಗಲಿ ಅವಕಾಶವಿಲ್ಲ.


ಒಳ್ಳೇ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಆ ಬಡ ಆಕಳುಗಳೂ ಮೂಡಣ ಗಾಳಿಯಿಂದ ಕೆಟ್ಟುಹೋಗಿದ್ದ ಆ ಏಳು ಕಾಳಿಲ್ಲದ ತೆನೆಗಳೂ ಬರವುಂಟಾಗುವ ಏಳು ವರುಷಗಳನ್ನು ಸೂಚಿಸುತ್ತವೆ.


ವೈದಿಕರ ಭೂವಿುಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ವೈದಿಕರಿಗೆ ಫರೋಹನ ಕಡೆಯಿಂದ ಆಯವು ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಆಯದಿಂದ ಜೀವನ ಮಾಡುತ್ತಿದ್ದರು; ಆದದರಿಂದ ತಮ್ಮ ಭೂವಿುಯನ್ನು ಮಾರಲಿಲ್ಲ.


ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ವಿುಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ, ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಜೀವನಕ್ಕಾಗುತ್ತದೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು