Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:25 - ಕನ್ನಡ ಸತ್ಯವೇದವು J.V. (BSI)

25 ಅದಕ್ಕೆ ಅವರು - ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾವಿುಯ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಅವರು, ನಮ್ಮ ಪ್ರಾಣಗಳನ್ನು ಉಳಿಸಿದ್ದೀರಿ. ನಮ್ಮ ದಣಿಗಳಾದ ನಿಮ್ಮ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಊಳಿಗದವರಾಗಿರುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಜನರು, “ನೀನು ನಮ್ಮ ಜೀವವನ್ನು ಉಳಿಸಿರುವೆ. ನಾವು ಸಂತೋಷದಿಂದ ಫರೋಹನ ಗುಲಾಮರಾಗುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಅವರು, “ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ದಯೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:25
11 ತಿಳಿವುಗಳ ಹೋಲಿಕೆ  

ಏಸಾವನು - ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು - ಅದೇಕೆ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು ಎಂದು ಹೇಳಿದನು.


ಆಗ ಆಕೆಯು - ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತಾಡಿಸಿದಿರಿ ಅಂದಳು.


ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.


ಮತ್ತು ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟು ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ಹೊರಟನು.


ಬೊಗ್ಗಿ ನಮಸ್ಕರಿಸಿ - ಸ್ವಾವಿು, ದಯವಿರಲಿ; ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.


ಇದಲ್ಲದೆ ಜೀವಿಗಳ ಪ್ರತಿಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ ನಿನ್ನೊಂದಿಗೆ ಉಳಿಸಿ ಕಾಪಾಡಬೇಕು.


ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ವಿುಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ, ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಜೀವನಕ್ಕಾಗುತ್ತದೆ ಎಂದು ಹೇಳಿದನು.


ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬದನ್ನು ಯೋಸೇಫನು ಐಗುಪ್ತದೇಶದಲ್ಲಿ ಕಟ್ಟಳೆಯಾಗಿ ನೇವಿುಸಿದನು. ಈ ದಿನದವರೆಗೂ ಹಾಗೆಯೇ ಇದೆ. ವೈದಿಕರ ಭೂವಿುಯು ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.


ತರುವಾಯ ಆ ದೂತರು ಯಾಕೋಬನ ಬಳಿಗೆ ತಿರಿಗಿ ಬಂದು - ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆಂದು ಹೇಳಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು