Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:30 - ಕನ್ನಡ ಸತ್ಯವೇದವು J.V. (BSI)

30 ನಾನು ಪಿತೃಗಳಲ್ಲಿ ಸೇರಿದಾಗ ನನ್ನ ಶವವನ್ನು ಐಗುಪ್ತದೇಶದಿಂದ ತೆಗೆದುಕೊಂಡು ಹೋಗಿ ಆ ಪಿತೃಗಳ ಶ್ಮಶಾನ ಭೂವಿುಯಲ್ಲಿಯೇ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂಬದಾಗಿ ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕೆಂದು ಹೇಳಲು ಅವನು - ನೀನು ಹೇಳಿದಂತೆಯೇ ಮಾಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಾನು ಮೃತರಾದ ಪಿತೃಗಳೊಂದಿಗೆ ಸೇರಿಕೊಂಡಾಗ, ನನ್ನ ಶವವನ್ನು ಈಜಿಪ್ಟ್ ದೇಶದಿಂದ ತೆಗೆದುಕೊಂಡು ಹೋಗಿ, ಆ ಪಿತೃಗಳ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕು" ಎಂದು ಕೇಳಿಕೊಂಡನು. ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ,” ಎಂದು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನನ್ನ ಪೂರ್ವಿಕರನ್ನು ಸಮಾಧಿ ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಮಶಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು. ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:30
16 ತಿಳಿವುಗಳ ಹೋಲಿಕೆ  

ಅವನ ಮಕ್ಕಳಾದ ಇಸಾಕ್ ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂವಿುಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನಿಗೆ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿರುವದು;


ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್‍ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂವಿುಯಲ್ಲಿರುವ ಗವಿಯೊಳಗೆ ಹೂಣಿಟ್ಟನು.


ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ತಿರಿಗಿ ಕಟ್ಟುವದಕ್ಕೋಸ್ಕರ ಯೆಹೂದದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು ಎಂದು ಹೇಳಿದೆನು.


ನಾನು ಅರಸನಿಗೆ - ಅರಸನು ಚಿರಂಜೀವಿಯಾಗಿರಲಿ. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವದು ಹೇಗೆ ಎಂದು ಹೇಳಿದೆನು.


ಅನ್ನಪಾನಗಳನ್ನು ತೆಗೆದುಕೊಳ್ಳುವದಕ್ಕೋಸ್ಕರ ಹಿಂದಿರುಗಿ ಬಂದದರಿಂದ ನಿನ್ನ ಶವವು ನಿನ್ನ ಕುಟುಂಬ ಶ್ಮಶಾನಭೂವಿುಯನ್ನು ಸೇರುವದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ ಅಂದನು.


ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರಕೊಂಡುಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ ಎಂದನು.


ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕೆಂದು ಹೇಳಿ, ಹಾಗೆಯೇ ಮಾಡುತ್ತೇವೆಂಬದಾಗಿ ಅವರಿಂದ ಪ್ರಮಾಣ ಮಾಡಿಸಿದನು.


ನೀನಂತೂ ಸಮಾಧಾನದೊಡನೆ ಪಿತೃಗಳ ಬಳಿಗೆ ಸೇರುವಿ; ತುಂಬಾ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂವಿುಯು, ಅದಕ್ಕೆ ಸೇರಿದ ಗವಿಯೂ ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳೂ ಸಹಿತವಾಗಿ,


ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು; ಅದರಲ್ಲಿ ಅಬ್ರಹಾಮನಿಗೂ ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು.


ಅವನ ಮಕ್ಕಳಾದ ಏಸಾವ ಯಾಕೋಬರು ಅವನಿಗೆ ಸಮಾಧಿಮಾಡಿದರು.


ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇವಿುನಲ್ಲಿರುವ ಅವನ ತಂದೆಯ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು