Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:31 - ಕನ್ನಡ ಸತ್ಯವೇದವು J.V. (BSI)

31 ಇಸ್ರಾಯೇಲನು - ಪ್ರಮಾಣ ಮಾಡು ಅನ್ನಲು ಅವನು ಪ್ರಮಾಣಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿ ದೇವರಿಗೆ ನಮಸ್ಕಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇಸ್ರಾಯೇಲನು, “ಪ್ರಮಾಣಮಾಡು” ಎನ್ನಲು ಅವನು ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಬಾಗಿ ದೇವರಿಗೆ ನಮಸ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ಯಕೋಬನು ಆ ಹಾಸಿಗೆಯ ತಲೆಭಾಗದ ಕಡೆ ಬಾಗಿ ಸ್ತೋತ್ರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಇಸ್ರೇಲನು, “ನನಗೆ ಪ್ರಮಾಣ ಮಾಡು” ಎಂದು ಹೇಳಿದ್ದರಿಂದ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಮೇಲೆ ಇಸ್ರೇಲನು ಹಾಸಿಗೆಯ ಮೇಲೆ ಮತ್ತೆ ತನ್ನ ತಲೆಬಾಗಿ ದೇವರಿಗೆ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯಾಕೋಬನು ತನಗೆ ಪ್ರಮಾಣಮಾಡು ಎಂದಾಗ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:31
12 ತಿಳಿವುಗಳ ಹೋಲಿಕೆ  

ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ ಆರಸನೂ ಆದ ದಾವೀದನ ಮುಂದೆ ಬಂದು - ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ ಎಂದು ಅವನನ್ನು ಹರಸಿದ್ದಾರೆ; ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು -


ಯಾಕೋಬನು ತಾನು ಸಾಯುತ್ತಿರುವಾಗ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು; ತನ್ನ ಕೋಲಿನ ಮೇಲೆ ಬಾಗಿಕೊಂಡು ದೇವರಿಗೆ ನಮಸ್ಕಾರಮಾಡಿದನು.


ನಾನು ವಾಸವಾಗಿರುವ ಕಾನಾನ್ಯರಲ್ಲಿ ನೀನು ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ಸ್ವದೇಶಕ್ಕೂ


ಇಸ್ರಾಯೇಲನಿಗೆ ಅವಸಾನಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರಸಿ - ನಿನಗೆ ನನ್ನ ಮೇಲೆ ಪ್ರೀತಿಯಿದ್ದರೆ ನೀನು ನಂಬಿಕೆಯಿಂದಲೂ ಪ್ರೀತಿಯಿಂದಲೂ ನನ್ನ ಮಾತನ್ನು ನಡಿಸಬೇಕು; ಏನಂದರೆ, ನನಗೆ ಐಗುಪ್ತ ದೇಶದಲ್ಲಿ ಸಮಾಧಿಮಾಡಬೇಡವೆಂದು ಕೇಳಿಕೊಳ್ಳುತ್ತೇನೆ.


ಆ ಮನುಷ್ಯನು ಇದನ್ನು ಕೇಳಿ ಬೊಗ್ಗಿಕೊಂಡು ಯೆಹೋವನಿಗೆ ನಮಸ್ಕರಿಸಿ -


ನೀನು ಈ ಸ್ಥಳದಲ್ಲಿ ನನ್ನೊಂದಿಗೆ [ಒಡಂಬಡಿಕೆಮಾಡಿಕೊಂಡು] ನೀನು ನನಗಾಗಲಿ ನನ್ನ ಪುತ್ರಪೌತ್ರರಿಗಾಗಲಿ ಏನೂ ಅನ್ಯಾಯ ಮಾಡದೆ ನಾನು ನಿನಗೆ ಹಿತವನ್ನು ಮಾಡಿದಂತೆಯೇ ನನಗೂ ನೀನು ಇಳುಕೊಂಡಿರುವ ಈ ದೇಶಕ್ಕೂ ಹಿತವನ್ನು ಮಾಡುವದಾಗಿ ದೇವರ ಮೇಲೆ ಪ್ರಮಾಣಮಾಡಬೇಕೆಂದು ಹೇಳಿದನು.


ಅದಕ್ಕೆ ಅಬ್ರಹಾಮನು - ಹಾಗೆಯೇ ಪ್ರಮಾಣ ಮಾಡುತ್ತೇನೆ ಅಂದನು.


ಅಬ್ರಹಾಮ ನಾಹೋರರ ದೇವರು ಅಂದರೆ ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದನು. ಅದೇ ಮೇರೆಗೆ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.


ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕೆಂದು ಹೇಳಿ, ಹಾಗೆಯೇ ಮಾಡುತ್ತೇವೆಂಬದಾಗಿ ಅವರಿಂದ ಪ್ರಮಾಣ ಮಾಡಿಸಿದನು.


ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರೀ ಸೇವಕನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು