Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:7 - ಕನ್ನಡ ಸತ್ಯವೇದವು J.V. (BSI)

7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೋಸೇಫನು ತನ್ನ ತಂದೆ ಯಾಕೋಬನನ್ನು ಕರೆದುಕೊಂಡು ಬಂದು, ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:7
18 ತಿಳಿವುಗಳ ಹೋಲಿಕೆ  

ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.


ನೀವು ದೇವರ ದಾಸರಾಗಿದ್ದೀರಲ್ಲಾ. ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಸನ್ಮಾನಿಸಿರಿ.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಶಿಷ್ಯರಿಗೆ ಕೊಟ್ಟು - ತಕ್ಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ ಅಂದನು.


ಆಗ ಎಲೀಷನು ಗೇಹಜಿಗೆ - ನೀನು ನಡು ಕಟ್ಟಿಕೊಂಡು ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮೋರೆಯ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಅವರ ವಂದನೆಯನ್ನೂ ಸ್ವೀಕರಿಸಬೇಡ ಎಂದು ಹೇಳಿ ಕಳುಹಿಸಿದನು.


ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ ಆರಸನೂ ಆದ ದಾವೀದನ ಮುಂದೆ ಬಂದು - ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ ಎಂದು ಅವನನ್ನು ಹರಸಿದ್ದಾರೆ; ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು -


ಎಲ್ಲಾ ಜನರೂ ಹೊಳೆದಾಟಿದರು. ಅರಸನು ಹೊಳೆದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.


ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ - ಅರಸನೇ, ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿತು ಎಂದು ಹೇಳಿ


(ತೋವಿಗೂ ಹದದೆಜೆರನಿಗೂ ವಿರೋಧವಿತ್ತು.) ದಾವೀದನು ಹದದೆಜೆರನ ಮೇಲೆ ಬಿದ್ದು ಅವನನ್ನು ಸೋಲಿಸಿದದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ ಬೆಳ್ಳಿ ಬಂಗಾರದ ಪಾತ್ರೆಗಳನ್ನು ತಂದನು.


ಏಲಿಯು ಎಲ್ಕಾನನಿಗೆ - ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರಿಗಿ ಸ್ವಸ್ಥಳಕ್ಕೆ ಹೋಗುತ್ತಿದ್ದರು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ ಹೆಬ್ರೋನ್ ಪಟ್ಟಣವನ್ನು ಅವನಿಗೆ ಸ್ವಾಸ್ತ್ಯವಾಗಿ ಕೊಟ್ಟನು.


ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು; ಅದಲ್ಲದೆ ನನ್ನ ಹಿತಕ್ಕಾಗಿಯೂ ಪ್ರಾರ್ಥಿಸಿರಿ ಅಂದನು.


ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೊನೆಂಬ ಕಿರ್ಯತರ್ಬಕ್ಕೆ ಸೇರಿರುವದು; ಅದೇ ಅಬ್ರಹಾಮ್ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಫರೋಹನು - ನಿನಗೆಷ್ಟು ವರುಷಗಳು ಎಂದು ಕೇಳಲು


ಅವರನ್ನು ಆಶೀರ್ವದಿಸಿ ಕಳುಹಿಸಿದನು.


ಎಂಟನೆಯ ದಿವಸ ಜನರಿಗೆ ಹೋಗುವದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಮಾಡಿದ ಸರ್ವೋಪಕಾರಗಳನ್ನು ನೆನಸಿ ಆನಂದಚಿತ್ತರಾಗಿ ಹರ್ಷಿಸುತ್ತಾ ತಮ್ಮತಮ್ಮ ನಿವಾಸಗಳಿಗೆ ತೆರಳಿದರು.


ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು