Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:9 - ಕನ್ನಡ ಸತ್ಯವೇದವು J.V. (BSI)

9 ಯಾಕೋಬನು - ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ; ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇತ್ತು; ನನ್ನ ಪಿತೃಗಳು ಲೋಕಯಾತ್ರೆ ಮಾಡಿದಷ್ಟು ವರುಷಗಳು ನನಗಾಗಿಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಕೋಬನು ಫರೋಹನಿಗೆ, “ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ. ನನ್ನ ವರ್ಷಗಳು ಕಡಿಮೆಯಾದರೂ ಕಠಿಣವಾದವುಗಳು ಆಗಿವೆ. ಅವು ನನ್ನ ಪಿತೃಗಳ ಪ್ರಯಾಣದ ವರ್ಷಗಳಿಗೆ ಸಮವಾಗಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:9
29 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ ಪರದೇಶದವನೂ ಆಗಿದ್ದೇನಲ್ಲಾ.


ಇಸಾಕನು ದಿನತುಂಬಿದ ಮುದುಕನಾಗಿದ್ದು ನೂರ ಎಂಭತ್ತನೆಯ ವರುಷದಲ್ಲಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ನನ್ನ ಆಯುಸ್ಸನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರೀ ಉಸಿರೇ. ಸೆಲಾ.


ಸ್ತ್ರೀಯಲ್ಲಿ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನಾಗಿಯೂ ಕಳವಳದಿಂದ ತುಂಬಿದವನಾಗಿಯೂ ಇರುವನು.


ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರುಷದವನಾಗಿ ಮರಣ ಹೊಂದಿದನು.


ಮೋಶೆ ಸಾಯುವಾಗ ನೂರಿಪ್ಪತ್ತು ವರುಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ಅವರು ಫರೋಹನ ಹತ್ತಿರ ಮಾತಾಡಿದ ಕಾಲದಲ್ಲಿ ಮೋಶೆ ಎಂಭತ್ತು ವರುಷದವನೂ ಆರೋನನು ಎಂಭತ್ತುಮೂರು ವರುಷದವನೂ ಆಗಿದ್ದರು.


ನಾನು ಅವರಿಗೆ - ನೀವು ಪ್ರವಾಸವಾಗಿರುವ ಕಾನಾನ್ ದೇಶವನ್ನು ನಿಮಗೇ ಕೊಡುವೆನೆಂಬದಾಗಿ ದೃಢವಾಗಿ ವಾಗ್ದಾನ ಮಾಡಿದೆನಷ್ಟೆ.


ಯೋಸೇಫನು ನೂರಹತ್ತು ವರುಷದವನಾಗಿ ಸತ್ತನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.


ಪ್ರಿಯರೇ, ಪ್ರವಾಸಿಗಳೂ ಪರದೇಶಸ್ಥರೂ ಆಗಿರುವ ನೀವು ನಿಮ್ಮ ಆತ್ಮದ ಮೇಲೆ ಯುದ್ಧಮಾಡುವ ಶಾರೀರಿಕ ಅಭಿಲಾಷೆಗಳಿಗೆ ದೂರವಾಗಿರಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ನಿಮ್ಮ ಜೀವಮಾನವು ಎಂಥದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹಬೆಯಂತಿರುತ್ತೀರಿ.


ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಬಂಧನೆಗಳು ನನಗೆ ಗಾಯನವಾದವು.


ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ; ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.


ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರುಷ ಇದ್ದನು. ಅವನ ಜೀವಿತಕಾಲವು ಒಟ್ಟಿಗೆ ನೂರ ನಾಲ್ವತ್ತೇಳು ವರುಷಗಳು.


ಅವನು ಅರ್ಪಕ್ಷದನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ಐನೂರು ವರುಷ ಬದುಕಿದನು.


ಯಾಕಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ; ಇನ್ನು ಮುಂದೆ ಆಗುವ ಪಟ್ಟಣವನ್ನು ಹಾರೈಸುತ್ತಾ ಇದ್ದೇವೆ.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ ನಮ್ಮ ಪಿತೃಗಳೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ, ನಮ್ಮ ಆಯುಷ್ಕಾಲವು ನೆರಳಿನಂತಿದೆ; ನಮಗೆ ಯಾವ ನಿರೀಕ್ಷೆಯೂ ಇಲ್ಲ.


ಅವನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷ ಬದುಕಿ ಸತ್ತನು.


ಹೀಗಿರುವದರಿಂದ ನಾವು ಯಾವಾಗಲೂ ಧೈರ್ಯವುಳ್ಳವರಾಗಿದ್ದೇವೆ.


ಫರೋಹನು - ನಿನಗೆಷ್ಟು ವರುಷಗಳು ಎಂದು ಕೇಳಲು


ನಾನು ಬಿಟ್ಟುಹೋಗಿ ಇಲ್ಲವಾಗುವದಕ್ಕಿಂತ ಮುಂಚೆ ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು