ಆದಿಕಾಂಡ 48:1 - ಕನ್ನಡ ಸತ್ಯವೇದವು J.V. (BSI)1 ಕೆಲವು ಕಾಲವಾದ ಮೇಲೆ ತಂದೆಯು ಬಹಳ ಬಲಹೀನನಾಗಿ ಬಿದ್ದಿದ್ದಾನೆಂಬ ವರ್ತಮಾನವು ಯೋಸೇಫನಿಗೆ ಬರಲು ಅವನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ಸಂಗಡ ಕರೆದುಕೊಂಡು ಅವನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ವಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕೆಲವು ಕಾಲವಾದ ಮೇಲೆ, “ತಂದೆ ಬಹಳ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದಾರೆ,” ಎಂಬ ಸುದ್ದಿ ಜೋಸೆಫನಿಗೆ ಬಂದಿತು. ಅವನು ಮನಸ್ಸೆ ಮತ್ತು ಎಫ್ರಯಿಮ್ ಎಂಬ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸ್ವಲ್ಪ ಕಾಲದ ನಂತರ, ತಂದೆಯು ಬಹಳ ಅನಾರೋಗ್ಯದಿಂದಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆಯನ್ನು ಮತ್ತು ಎಫ್ರಾಯೀಮನನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು. ಅಧ್ಯಾಯವನ್ನು ನೋಡಿ |