ಆದಿಕಾಂಡ 48:17 - ಕನ್ನಡ ಸತ್ಯವೇದವು J.V. (BSI)17 ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವದಕ್ಕಾಗಿ ಹಿಡಿದು ತಂದೆಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತನ್ನ ತಂದೆಯು ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲೆ ಇಡುವುದನ್ನು ಯೋಸೇಫನು ಕಂಡು ಅಸಮಾಧಾನಪಟ್ಟು ಅವನ ಕೈಯನ್ನು ಎಫ್ರಾಯೀಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತನ್ನ ತಂದೆ ಬಲಗೈಯನ್ನು ಎಫ್ರಯಿಮನ ತಲೆಯ ಮೇಲೆ ಇಟ್ಟದ್ದು ಜೋಸೆಫನಿಗೆ ಹಿಡಿಸಲಿಲ್ಲ. ಅವನು ಆ ಕೈಯನ್ನು ಹಿಡಿದು ಎಫ್ರಯಿಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವಂತೆ ತಂದೆಗೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ತನ್ನ ತಂದೆಯು ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನು ಇಟ್ಟದ್ದನ್ನು ಯೋಸೇಫನು ಕಂಡಾಗ, ಅದು ಅವನಿಗೆ ಇಷ್ಟವಾಗಿರಲಿಲ್ಲ. ಆದ್ದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು, ಎಫ್ರಾಯೀಮನ ತಲೆಯ ಮೇಲಿಂದ ತೆಗೆದು, ಮನಸ್ಸೆಯ ತಲೆಯ ಮೇಲೆ ಇಡುವುದರಲ್ಲಿದ್ದನು. ಅಧ್ಯಾಯವನ್ನು ನೋಡಿ |
ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದೆಯೂ ಇದ್ದಾಗ - ಹಿರಿಯನು ಕಿರಿಯನಿಗೆ ಸೇವೆ ಮಾಡುವನೆಂಬದಾಗಿ ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಸ್ಥಿರವಾಗಿರಬೇಕೆಂದು ತೋರಿಸಿದನು. ಆ ಸಂಕಲ್ಪವು ಪುಣ್ಯಕ್ರಿಯೆಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.