Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:22 - ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ, ಕತ್ತಿ - ಬಿಲ್ಲುಗಳಿಂದ ನಾನು ಅಮೋರಿಯರ ವಶದಿಂದ ಪಡೆದ ಬೆಟ್ಟದ ತಪ್ಪಲನ್ನು, ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ, ನಿನಗೆ ಕೊಟ್ಟಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ನಿನ್ನ ಸಹೋದರರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ಬೇರೊಂದನ್ನು ನಿನಗೆ ಕೊಟ್ಟಿದ್ದೇನೆ. ನಾನು ಅಮೋರಿಯರಿಂದ ಗೆದ್ದುಕೊಂಡಿರುವ ಬೆಟ್ಟವನ್ನು ನಿನಗೆ ಕೊಡುವೆನು. ನಾನು ಅವರೊಂದಿಗೆ ಖಡ್ಗಗಳಿಂದಲೂ ಬಿಲ್ಲುಗಳಿಂದಲೂ ಹೋರಾಡಿ ಆ ಬೆಟ್ಟವನ್ನು ವಶಪಡಿಸಿಕೊಂಡಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ನಾನು ನನ್ನ ಖಡ್ಗದಿಂದಲೂ ಬಿಲ್ಲಿನಿಂದಲೂ ಅಮೋರಿಯರ ಕೈಯಿಂದ ತೆಗೆದುಕೊಂಡ ಒಂದು ಹೊಲವನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:22
12 ತಿಳಿವುಗಳ ಹೋಲಿಕೆ  

ಹೋಗುವಾಗ ಸಮಾರ್ಯಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂವಿುಯ ಹತ್ತಿರದಲ್ಲಿತ್ತು;


ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವಾಸ್ತ್ಯವಾಯಿತು.


ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಪ್ರಬಲನಾದದರಿಂದಲೂ ರಾಜ್ಯಾಧಿಕಾರವು ಇವನ ಕುಲಕ್ಕೆ ಬಂದದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲನೆಂದು ಲಿಖಿತನಾಗಲಿಲ್ಲ; ಆದರೂ ಚೊಚ್ಚಲನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು; ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ ಅಲ್ಲೋನ್ ಮರದ ಹಾಗೆ ದೃಢವಾಗಿ ಇದ್ದರೂ ಮೇಲೆ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ಇಸ್ರಾಯೇಲ್‍ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವದು ಹೇಗೆ?


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ,


ಅವರ ಕುರಿ ದನ ಕತ್ತೆಗಳನ್ನೂ ಊರಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ಸುಲುಕೊಂಡು


ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂವಿುಯನ್ನು ಹಮೋರನ ಮಕ್ಕಳಿಗೆ ನೂರು ವರಹಾ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡುಪಾಲು ಸೇರಲಿ.


ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು