Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:3 - ಕನ್ನಡ ಸತ್ಯವೇದವು J.V. (BSI)

3 ಯಾಕೋಬನು ಯೋಸೇಫನಿಗೆ - ಸರ್ವಶಕ್ತನಾದ ದೇವರು ಕಾನಾನ್‍ದೇಶದ ಲೂಜಿನಲ್ಲಿ ನನಗೆ ದರ್ಶನಕೊಟ್ಟು ಆಶೀರ್ವದಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೋಬನು, ಯೋಸೇಫನಿಗೆ, “ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಜೋಸೆಫನಿಗೆ, “ಸರ್ವವಲ್ಲಭರಾದ ದೇವರು ಕಾನಾನ್ ನಾಡಿನ ಲೂಜಿನಲ್ಲಿ ನನಗೆ ದರ್ಶನಕೊಟ್ಟು, ಆಶೀರ್ವದಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಳಿಕ ಇಸ್ರೇಲನು ಯೋಸೇಫನಿಗೆ, “ಸರ್ವಶಕ್ತನಾದ ದೇವರು ನನಗೆ ಕಾನಾನ್ ದೇಶದ ಲೂಜ್ ಎಂಬ ಸ್ಥಳದಲ್ಲಿ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯಾಕೋಬನು ಯೋಸೇಫನಿಗೆ, “ಸರ್ವಶಕ್ತ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು, ನನ್ನನ್ನು ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:3
12 ತಿಳಿವುಗಳ ಹೋಲಿಕೆ  

ನಾನು ಯೆಹೋವನು; ಅಬ್ರಹಾಮ ಇಸಾಕ ಯಾಕೋಬರಿಗೆ ನಾನು ಸರ್ವಶಕ್ತನಾದ ದೇವರೆಂಬ ಹೆಸರುಳ್ಳವನಾಗಿ ಕಾಣಿಸಿಕೊಂಡೆನೇ ಹೊರತು ಯೆಹೋವನು ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು; ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯೂ ಕಂಡು ಅಲ್ಲಿ ನಮ್ಮೊಡನೆ ಮಾತಾಡಿದನು;


ಅವರು ಲೂಜ್ ಅನ್ನಿಸಿಕೊಳ್ಳುತ್ತಿದ್ದ ಬೇತೇಲ್ ಊರನ್ನು ಸಂಚರಿಸಿನೋಡುವದಕ್ಕೆ ಗೂಢಚಾರರನ್ನು ಕಳುಹಿಸಿದರು.


ನಿನ್ನ ಮಗನಾದ ಯೋಸೇಫನು ಬಂದನೆಂದು ಯಾಕೋಬನಿಗೆ ಒಬ್ಬನು ತಿಳಿಸಲು ಅವನು ಚೇತರಿಸಿಕೊಂಡು ಮಂಚದ ಮೇಲೆ ಕೂತುಕೊಂಡನು.


ಇದು ನಿನ್ನ ತಂದೆಯ ದೇವರಿಂದಾಯಿತು, ಆತನು ನಿನಗೆ ಸಹಾಯ ಮಾಡಲಿ; ಸರ್ವಶಕ್ತನಾದ ದೇವರಿಂದಾಯಿತು,ಅತನು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಣ ಆಕಾಶದಿಂದಲೂ ಕೆಳಗಣ ಸಾಗರದ ಸೆಲೆಗಳಿಂದಲೂ ಸ್ತನ್ಯದಿಂದಲೂ ಗರ್ಭದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.


ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು; ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರೂ ಹುಟ್ಟುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು