Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:4 - ಕನ್ನಡ ಸತ್ಯವೇದವು J.V. (BSI)

4 ನಾನು ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನಾಂಗಗಳು ನಿನ್ನಿಂದುಂಟಾಗುವಂತೆ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ನನಗೆ, ‘ನಾನು ನಿನಗೆ ಅನೇಕ ಮಕ್ಕಳನ್ನು ಕೊಡುತ್ತೇನೆ; ನಿನ್ನ ಸಂತತಿಯವರು ಅನೇಕ ಜನಾಂಗಗಳಾಗುವರು; ನಿನ್ನ ಸಂತತಿಯವರಿಗೆ ನಾನು ಈ ದೇಶವನ್ನು ಶಾಶ್ವತವಾಗಿ ಕೊಡುವೆನು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು, ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಶಾಶ್ವತವಾದ ಸ್ವತ್ತನ್ನಾಗಿ ಕೊಡುತ್ತೇನೆ,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:4
20 ತಿಳಿವುಗಳ ಹೋಲಿಕೆ  

ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು.


ಇದಲ್ಲದೆ ನಾನು ಸರ್ವಶಕ್ತನಾದ ದೇವರು. ನೀನು ಬಹು ಸಂತಾನವುಳ್ಳವನಾಗಿ ಹೆಚ್ಚು. ನಿನ್ನಿಂದ ಜನಾಂಗವುಂಟಾಗುವದು; ಅನೇಕ ಜನಾಂಗಗಳೂ ಅರಸರೂ ನಿನ್ನಿಂದ ಹುಟ್ಟುವರು.


ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇವಿುಸಿಕೊಟ್ಟಾಗ ಇಸ್ರಾಯೇಲ್ಯರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದ್ದೂ;


ಆದರೆ ಇಸ್ರಾಯೇಲ್ಯರು ಅಭಿವೃದ್ಧಿಯಾಗಿ ಅತ್ಯಧಿಕವಾಗಿ ಹೆಚ್ಚಿ ಬಹಳ ಬಲಗೊಂಡರು; ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ಇಸ್ರಾಯೇಲ್ಯರು ಐಗುಪ್ತದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.


ಆತನು - ನಾನು ದೇವರು, ನಿನ್ನ ತಂದೆ ಆರಾಧಿಸಿದ ದೇವರು; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾಜನಾಂಗವುಂಟಾಗುವಂತೆ ಮಾಡುವೆನು.


ನಿನಗೆ ಒಳ್ಳೇದನ್ನು ಮಾಡಿ ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲವೇ ಅಂದನು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞಾನೇಮವಿಧಿಗಳನ್ನು ಕೈಕೊಂಡು ನಡೆದದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಿ


ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ನಿನ್ನ ಮನೆಯಲ್ಲಿ ಹುಟ್ಟಿದವರಿಗೂ ನೀನು ಕ್ರಯಕ್ಕೆ ತೆಗೆದುಕೊಂಡವರಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ನಿಬಂಧನೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವದು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಆದಕಾರಣ ಅವನ ಜನರು ಇಸ್ರಾಯೇಲ್ಯರನ್ನು ಬಿಟ್ಟೀಕೆಲಸದಿಂದ ಉಪದ್ರವಪಡಿಸುವದಕ್ಕಾಗಿ ಬಿಟ್ಟೀಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇಟ್ಟು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸಿ ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಪುತ್ರಸಂತಾನವು ಯೆಹೋವನಿಂದ ಬಂದ ಸ್ವಾಸ್ತ್ಯವು; ಗರ್ಭಫಲವು ಆತನ ಬಹುಮಾನವೇ.


ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು; ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರೂ ಹುಟ್ಟುವರು.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು