Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:5 - ಕನ್ನಡ ಸತ್ಯವೇದವು J.V. (BSI)

5 ನಾನು ಐಗುಪ್ತದೇಶಕ್ಕೆ ನಿನ್ನ ಬಳಿಗೆ ಬರುವದಕ್ಕಿಂತ ಮುಂಚೆ ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೇ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನಾನು ನಿನ್ನ ಬಳಿಗೆ ಈಜಿಪ್ಟ್ ದೇಶಕ್ಕೆ ಬರುವುದಕ್ಕೆ ಮುಂಚೆ ಇಲ್ಲಿ ಹುಟ್ಟಿದ್ದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಬೇಕು. ರೂಬೇನ್ ಮತ್ತು ಸಿಮೆಯೋನ್ ನನ್ನ ಮಕ್ಕಳಾಗಿರುವಂತೆಯೇ ಎಫ್ರಯಿಮ್ ಮತ್ತು ಮನಸ್ಸೆ ನನ್ನ ಮಕ್ಕಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗ ನಿನಗೆ ಇಬ್ಬರು ಗಂಡುಮಕ್ಕಳಿದ್ದಾರೆ. ನಾನು ಈಜಿಪ್ಟಿಗೆ ಬರುವುದಕ್ಕಿಂತ ಮೊದಲೇ ಅವರು ಇಲ್ಲಿ ಹುಟ್ಟಿದರು. ನಿನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ನನ್ನ ಮಕ್ಕಳಂತೆಯೇ ಇದ್ದಾರೆ. ಅವರು ನನಗೆ ರೂಬೇನ್ ಮತ್ತು ಸಿಮೆಯೋನರಂತೆಯೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಈಗ ನಾನು ನಿನ್ನ ಬಳಿಗೆ ಈಜಿಪ್ಟಿಗೆ ಬರುವ ಮೊದಲು ಈಜಿಪ್ಟಿನಲ್ಲಿ ನಿನಗೆ ಹುಟ್ಟಿದ ಇಬ್ಬರು ಪುತ್ರರಾದ ಎಫ್ರಾಯೀಮ್ ಮನಸ್ಸೆಯರು ನನ್ನವರಾಗಿರಬೇಕು. ಅವರು ರೂಬೇನ್ ಮತ್ತು ಸಿಮೆಯೋನರಂತೆ ನನ್ನವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:5
21 ತಿಳಿವುಗಳ ಹೋಲಿಕೆ  

ಲೇವಿಯರಿಗೆ ಮಾತ್ರ ಕೊಡಲಿಲ್ಲ. ಯೋಸೇಫ್ಯರು ಮನಸ್ಸೆ, ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಎಣಿಸಲ್ಪಟ್ಟರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಅವರ ದನಕುರಿಗಳಿಗೋಸ್ಕರ ಅವುಗಳಿಗೆ ಸೇರಿದ ಹುಲ್ಲುಗಾವಲುಗಳೂ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ಐಗುಪ್ತದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಆಚಾರ್ಯನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಎಫ್ರಾಯೀಮ್;


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಇವುಗಳನ್ನೂ ಸೇರಿಸಿ ದೇಶವನ್ನೆಲ್ಲಾ ಒಂಭತ್ತು ಕುಲಗಳಿಗೂ ಮನಸ್ಸೆಕುಲದ ಅರ್ಧಜನರಿಗೂ ಪಾಲುಮಾಡಿ ಕೊಡು ಅಂದನು.


ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ಯೋಸೇಫನ ವಂಶದವರಲ್ಲಿ - ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,


ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದದರಿಂದ ನೀವು ನನಗೆ ಮೀಸಲಾಗಿರಬೇಕು.


ಯಾಕೋಬನು ತಾನು ಸಾಯುತ್ತಿರುವಾಗ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು; ತನ್ನ ಕೋಲಿನ ಮೇಲೆ ಬಾಗಿಕೊಂಡು ದೇವರಿಗೆ ನಮಸ್ಕಾರಮಾಡಿದನು.


ಕೆಲವು ಕಾಲವಾದ ಮೇಲೆ ತಂದೆಯು ಬಹಳ ಬಲಹೀನನಾಗಿ ಬಿದ್ದಿದ್ದಾನೆಂಬ ವರ್ತಮಾನವು ಯೋಸೇಫನಿಗೆ ಬರಲು ಅವನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ಸಂಗಡ ಕರೆದುಕೊಂಡು ಅವನ ಬಳಿಗೆ ಬಂದನು.


ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಲಿ, ಅವರು ತಮ್ಮ ಅಣ್ಣಂದಿರ ಸ್ವಾಸ್ತ್ಯದಲ್ಲಿ ಬಾಧ್ಯತೆ ಹೊಂದಿ ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡುಪಾಲು ಸೇರಲಿ.


ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು