Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:6 - ಕನ್ನಡ ಸತ್ಯವೇದವು J.V. (BSI)

6 ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಲಿ, ಅವರು ತಮ್ಮ ಅಣ್ಣಂದಿರ ಸ್ವಾಸ್ತ್ಯದಲ್ಲಿ ಬಾಧ್ಯತೆ ಹೊಂದಿ ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸ್ವತ್ತಿನಲ್ಲಿ ಬಾಧ್ಯತೆ ಹೊಂದಿ, ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸೊತ್ತಿಗೆ ಬಾಧ್ಯತೆ ಪಡೆದು ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಈ ಇಬ್ಬರು ಗಂಡುಮಕ್ಕಳು ನನಗೆ ಮಕ್ಕಳಂತೆಯೇ ಇರುತ್ತಾರೆ. ನಾನು ಹೊಂದಿರುವ ಪ್ರತಿಯೊಂದರಲ್ಲಿಯೂ ಅವರು ಪಾಲನ್ನು ಹೊಂದುವರು. ಆದರೆ ನಿನಗೆ ಬೇರೆ ಗಂಡುಮಕ್ಕಳಿದ್ದರೆ ಅವರು ಎಫ್ರಾಯೀಮ್ ಮತ್ತು ಮನಸ್ಸೆಯವರಿಗೆ ಮಕ್ಕಳಾಗಿರುತ್ತಾರೆ. ಅಂದರೆ ಎಫ್ರಾಯೀಮ್ ಮತ್ತು ಮನಸ್ಸೆ ಹೊಂದಿರುವ ಪ್ರತಿಯೊಂದರಲ್ಲಿ ಅವರು ಪಾಲನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ಸಹೋದರರ ಸೊತ್ತಿಗೆ ಬಾಧ್ಯತೆಯನ್ನು ಪಡೆದು ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:6
3 ತಿಳಿವುಗಳ ಹೋಲಿಕೆ  

ಲೇವಿಯರಿಗೆ ಮಾತ್ರ ಕೊಡಲಿಲ್ಲ. ಯೋಸೇಫ್ಯರು ಮನಸ್ಸೆ, ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಎಣಿಸಲ್ಪಟ್ಟರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಅವರ ದನಕುರಿಗಳಿಗೋಸ್ಕರ ಅವುಗಳಿಗೆ ಸೇರಿದ ಹುಲ್ಲುಗಾವಲುಗಳೂ ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ನಾನು ಐಗುಪ್ತದೇಶಕ್ಕೆ ನಿನ್ನ ಬಳಿಗೆ ಬರುವದಕ್ಕಿಂತ ಮುಂಚೆ ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೇ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ನಾನು ಪದ್ದನ್ಅರಾವಿುನಿಂದ ಬರುತ್ತಿರಲು ಕಾನಾನ್‍ದೇಶದಲ್ಲಿ ಎಫ್ರಾತನ್ನು ಸೇರುವದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತು ನನ್ನನ್ನು ಅಗಲಿಹೋದಳು. ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು