Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:1 - ಕನ್ನಡ ಸತ್ಯವೇದವು J.V. (BSI)

1 ಯಾಕೋಬನು ತನ್ನ ಮಕ್ಕಳನ್ನು ಕರಸಿ - ನೀವೆಲ್ಲರೂ ಕೂ ಡಿಬನ್ನಿರಿ; ಮುಂದಿನ ಕಾಲದಲ್ಲಿ ನಿಮಗೆ ಸಂಭವಿಸುವದನ್ನು ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಯಾಕೋಬನು ತನ್ನ ಗಂಡುಮಕ್ಕಳನ್ನು ತನ್ನ ಬಳಿಗೆ ಕರೆಯಿಸಿ, “ನನ್ನ ಎಲ್ಲಾ ಗಂಡುಮಕ್ಕಳೇ, ನನ್ನ ಬಳಿಗೆ ಬನ್ನಿರಿ. ನಿಮಗೆ ಮುಂದೆ ಏನು ಸಂಭವಿಸುವುದೆಂದು ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯಾಕೋಬನು ತನ್ನ ಪುತ್ರರನ್ನು ಕರೆಯಿಸಿ ಅವರಿಗೆ, “ನೀವೆಲ್ಲರೂ ಕೂಡಿಬನ್ನಿರಿ. ಅಂತ್ಯ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:1
28 ತಿಳಿವುಗಳ ಹೋಲಿಕೆ  

ಆಗಲಿ; ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ;


ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು.


ಯೆಹೋವನು ತನ್ನ ಹೃದಯಾಲೋಚನೆಗಳನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಇವುಗಳಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ಮತ್ತು ನನ್ನ ಸಂಗಡ ತುತೂರಿಯು ಮಾತಾಡುತ್ತದೋ ಎಂಬಂತೆ ನಾನು ಮೊದಲು ಕೇಳಿದ್ದ ವಾಣಿಯು ಕೇಳಿಸಿತು. ಇಲ್ಲಿಗೆ ಏರಿ ಬಾ, ಮುಂದೆ ಆಗಬೇಕಾದವುಗಳನ್ನು ನಿನಗೆ ತೋರಿಸುವೆನು ಎಂದು ಹೇಳಿತು. ಕೂಡಲೆ ದೇವರಾತ್ಮವಶನಾದೆನು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.


ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು.


ಆದರೆ ಕಡೇ ದಿವಸಗಳಲ್ಲಿ ಕಠಿನಕಾಲಗಳು ಬರುವವೆಂಬದನ್ನು ತಿಳಿದುಕೋ.


ಆದರೂ ಮುಂದಣ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ.


ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;


ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವದಕ್ಕಿಂತ ಮುಂಚೆ ನೀನು ಸಾಯುವದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವವು.


ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.


ಪಾರಸಿಯ ರಾಜನಾದ ಕೋರೆಷನ ಆಳಿಕೆಯ ಮೂರನೆಯ ವರುಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಬಹು ಕಷ್ಟದ ಗಡುವಿನ ಆ ಸಂಗತಿಯು ಸತ್ಯ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮಂದಟ್ಟುಮಾಡಿಕೊಂಡನು.


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ಆತನು - ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗೆ ಗೋಚರಪಡಿಸಿದ್ದೇನಂದರೆ - ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ ಎಂಬದೇ.


ಸಹೋದರ ಸ್ನೇಹವು ನೆಲೆಯಾಗಿರಲಿ.


ನೀವೆಲ್ಲರು ಕೂಡಿಕೊಂಡು ಕೇಳಿರಿ! ಇವರಲ್ಲಿನ ಯಾವ ದೇವರು ಈ ಸಂಗತಿಗಳನ್ನು ಅರುಹಿದ್ದಾನೆ? ಯೆಹೋವನ ಪ್ರೀತಿಪಾತ್ರನು ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು, ಕಸ್ದೀಯರ ಮೇಲೆ ಕೈಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು