Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:10 - ಕನ್ನಡ ಸತ್ಯವೇದವು J.V. (BSI)

10 ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:10
58 ತಿಳಿವುಗಳ ಹೋಲಿಕೆ  

ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ನಮ್ಮ ಕರ್ತನು ಯೆಹೂದ ಕುಲದಲ್ಲಿ ಜನಿಸಿದವನೆಂಬದು ಪ್ರಸಿದ್ಧವಾಗಿದೆಯಷ್ಟೆ; ಈ ಕುಲದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಒಂದು ಮಾತನ್ನಾದರೂ ಹೇಳಲಿಲ್ಲ.


ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್‍ನದಿಯೆಲ್ಲಾ ತಳದ ತನಕ ಒಣಗುವದು, ಅಶ್ಶೂರದ ಗರ್ವವು ತಗ್ಗಿಸಲ್ಪಡುವದು, ಐಗುಪ್ತದ ರಾಜದಂಡವು ತಪ್ಪಿಹೋಗುವದು.


ನಾನು ದೊಬ್ಬಿಬಿಡುವೆನು, ದೊಬ್ಬಿಬಿಡುವೆನು, ದೊಬ್ಬಿಬಿಡುವೆನು; [ರಾಜ್ಯಕ್ಕೆ] ಬಾಧ್ಯನು ಬರುವದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಮತ್ತೊಂದು ಸ್ಥಳದಲ್ಲಿ ಯೆಶಾಯನು ಹೇಳುವದೇನಂದರೆ - ಇಷಯನ ಅಂಕುರದವನು ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ; ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.


ಆದರೆ ನಾನು ಭೂವಿುಯಲ್ಲಿಂದ ಮೇಲಕ್ಕೆ ಎತ್ತಲ್ಪಟ್ಟಾಗ ಎಲ್ಲರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಎಂದು ಹೇಳಿದನು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಅದಕ್ಕೆ ಅವರು - ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು - ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ? ಅಂದದ್ದಕ್ಕೆ ಮಹಾಯಾಜಕರು - ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರಕೊಟ್ಟರು.


ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.


ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನೊಂದಿಗಿದೆ, ಆತನು ಅನುಗ್ರಹಿಸುವ ಪ್ರತಿಫಲವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ ಎಂಬದಾಗಿ ಯೆಹೋವನು ಭೂವಿುಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಎಫ್ರಾಯೀಮು ಸುಳ್ಳಿನಿಂದಲೂ ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ ಸದಮಲಸ್ವಾವಿುಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ.


ಇದು ಪ್ರಧಾನರು ದಂಡಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ ಎಂಬದೇ.


ಮತ್ತು ಎಲ್ಲಾ ದೇಶಗಳ ಜನರು ಆತನ ಮುಂದೆ ಕೂಡಿಸಲ್ಪಡುವರು. ಕುರುಬನು ಆಡುಗಳನ್ನೂ ಕುರಿಗಳನ್ನೂ ಬೇರೆಬೇರೆಮಾಡುವ ಪ್ರಕಾರ ಆತನು ಅವರನ್ನು ಬೇರೆಬೇರೆಮಾಡಿ


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಆ ಆಲಯವನ್ನು ವೈಭವದಿಂದ ತುಂಬಿಸುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಇದನ್ನು ತಿಳಿದು ಮಂದಟ್ಟುಮಾಡಿಕೋ; ಯೆರೂಸಲೇಮು ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ಪ್ರಭುವು ಬರುವದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರುವತ್ತೆರಡು ವಾರ ಇರುವದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಬೆಂಕಿಯು ದಂಡರೂಪವಾದ ಅದರ ಶಾಖೆಗಳಿಂದ ಹೊರಟು ಅದರ ಫಲವನ್ನು ನುಂಗಿಬಿಟ್ಟದ್ದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕಗೀತ, ಶೋಕಗೀತವಾಗಿ ವಾಡಿಕೆಯಲ್ಲಿದೆ.


ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಈ ಮಾತಿನ ದೆಸೆಯಿಂದ ಪಿಲಾತನು ಆತನನ್ನು ಬಿಡಿಸುವದಕ್ಕೆ ಪೇಚಾಡಿದನು. ಆದರೆ ಯೆಹೂದ್ಯರು - ನೀನು ಇವನನ್ನು ಬಿಡಿಸಿದರೆ ನೀನು ಕೈಸರನಿಗೆ ವಿುತ್ರನಲ್ಲ; ತನ್ನನ್ನು ಅರಸನಾಗಿ ಮಾಡಿಕೊಳ್ಳುವವನು ಕೈಸರನಿಗೆ ವಿರೋಧಿ ಎಂದು ಕೂಗಿ ಹೇಳಿದರು.


ಆಗ ಪಿಲಾತನು ಅವರಿಗೆ - ನೀವೇ ಅವನನ್ನು ತಕ್ಕೊಂಡುಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಅವನಿಗೆ ತೀರ್ಪುಮಾಡಿರಿ ಎಂದು ಹೇಳಿದನು. ಅದಕ್ಕೆ ಯೆಹೂದ್ಯರು - ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗಿಲ್ಲ ಅಂದರು.


ಅದರಲ್ಲಿ ರಾಜದಂಡಯೋಗ್ಯವಾದ ಗಟ್ಟಿ ಕೊಂಬೆಗಳಿದ್ದವು, ಅವುಗಳ ಎತ್ತರವು ವಿುಕ್ಕ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹು ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.


ನೀನು ಸಿಲೋವ ಕೊಳಕ್ಕೆ ಹೋಗಿ ತೊಳಕೋ ಅಂದನು. (ಸಿಲೋವ ಎಂಬ ಮಾತಿಗೆ ಕಳುಹಿಸಲ್ಪಟ್ಟವನು ಎಂದರ್ಥ.) ಅವನು ಹೋಗಿ ತೊಳಕೊಂಡು ಕಣ್ಣು ಹೊಂದಿದವನಾಗಿ ಬಂದನು.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ಇಸ್ರಾಯೇಲ್ಯರೋ ಬಲಗೊಂಡವರು; ಯಾಕೋಬ್ಯರಿಗೇ ದೊರೆತನವಾಯಿತು; ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು ಅಂದನು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವವು; ನಿನ್ನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.


ಯೆಹೂದ್ಯರಿಂದ ಬರ್ಜಿಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟು ನೂರು ಮಂದಿ;


ಅವರು ಅಲ್ಲಿ ಮೂರು ದಿವಸ ದಾವೀದನ ಸಂಗಡ ಇದ್ದು ಅನ್ನಪಾನಗಳನ್ನು ತೆಗೆದುಕೊಂಡರು; ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.


ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತದೊಳಗೆ ನನ್ನನ್ನು ಸೇರಿಸುವವರು ಯಾರು?


ಯೆಹೂದಕುಲವನ್ನೂ ತನ್ನ ಪ್ರಿಯ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದಲ್ಲೆಲ್ಲಾ ಇಂಗಿರುವದು; ನೀನು ಇನ್ನು ಜ್ಞಾಪಕಕ್ಕೆ ಬರುವದಿಲ್ಲ; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.


ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು