Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:15 - ಕನ್ನಡ ಸತ್ಯವೇದವು J.V. (BSI)

15 ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವದನ್ನು ನೋಡಿ ಅವನು ಹೊರೆಯನ್ನು ಹೊರುವದಕ್ಕೆ ಬೆನ್ನು ಬೊಗ್ಗಿಸಿಕೊಂಡು ಬಿಟ್ಟೀ ಕೆಲಸವನ್ನು ಮಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೂಕ್ತವೆಂದುಕೊಂಡು ತನ್ನ ನಾಡು ವಿಶ್ರಾಂತಿಗೆ, ಸುಖಾನುಭವಕೆ ಬಗ್ಗಿಸುವನು ಬೆನ್ನನು ಹೊರೆ ಹೊರುವುದಕ್ಕೆ, ಬಿಟ್ಟಿಯ ಕೆಲಸಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ ಮತ್ತು ಪ್ರಶಾಂತವಾಗಿರುವ ನಾಡನ್ನು ನೋಡುವನು. ಅವನು ಭಾರವಾದ ಹೊರೆಗಳನ್ನು ಹೊರುವುದಕ್ಕೂ ಗುಲಾಮನಂತೆ ದುಡಿಯುವುದಕ್ಕೂ ಒಪ್ಪಿಕೊಳ್ಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವಿಶ್ರಾಂತಿಯು ಒಳ್ಳೆಯದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆ ಹೊರುವುದಕ್ಕೆ ತನ್ನ ಹೆಗಲನ್ನು ಬಗ್ಗಿಸಿ ಬಿಟ್ಟಿಯ ಕೆಲಸ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:15
10 ತಿಳಿವುಗಳ ಹೋಲಿಕೆ  

ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.


ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆಹಾಕಿ ತನ್ನ ಸೈನಿಕರಿಂದ ಬಹುಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ತೂರಿನಿಂದ ಸಂಬಳವೇನೂ ಸಿಕ್ಕಲಿಲ್ಲ.


ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.


ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದಾಗ


ದೇಶದಲ್ಲಿ ನಾಲ್ವತ್ತು ವರುಷಗಳ ಪರ್ಯಂತರ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.


ಅದರ ಮುಂಚಿನ ಹೆಸರು ಕಿರ್ಯತ್ಅರ್ಬ ಎಂಬದು. ಅರ್ಬ ಎಂಬವನು ಉನ್ನತ ಪುರುಷರಲ್ಲಿ ಪ್ರಮುಖನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನವುಂಟಾಯಿತು.


ಇಸ್ಸಾಕಾರನು ಕುರೀಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.


ದಾನನು ಇಸ್ರಾಯೇಲ್ಯರ ಕುಲಗಳಿಗೆ ಯೋಗ್ಯವಾಗುವ ರೀತಿಯಲ್ಲಿ ತನ್ನ ಜನರ ವ್ಯಾಜ್ಯವನ್ನು ಜಯಕ್ಕೆ ತರುವನು.


ಚುರುಕುಗೈಯವನಿಗೆ ರಾಜ್ಯಾಧಿಕಾರ; ಮೈಗಳ್ಳನಿಗೆ ಬಿಟ್ಟಿಯ ಬದುಕು.


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು, ಅದು ಮನುಷ್ಯರ ಕತ್ತಿಯಲ್ಲ; ಖಡ್ಗವು ಅವರನ್ನು ನುಂಗುವದು, ಅದು ಮಾನವಖಡ್ಗವಲ್ಲ; ಅವರು ಕತ್ತಿಯ ಕಡೆಯಿಂದ ಓಡುವರು, ಅವರ ಯೌವನಸ್ಥರು ಬಿಟ್ಟಿಹಿಡಿಯಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು