Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:29 - ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ - ನಾನು ನನ್ನ ಪಿತೃಗಳ ಬಳಿಗೆ ಸೇರಬೇಕಾದ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂವಿುಯಲ್ಲಿರುವ ಗವಿಯೊಳಗೆ ನನಗೆ ಪಿತೃಗಳ ಬಳಿಯಲ್ಲಿ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, “ನಾನು ನನ್ನ ಜನರೊಂದಿಗೆ ಸೇರಿಕೊಳ್ಳುತ್ತೇನೆ. ನನ್ನ ಪಿತೃಗಳ ಸಂಗಡ ಹಿತ್ತಿಯನಾದ ಎಫ್ರೋನನ ಹೊಲದಲ್ಲಿರುವ ಗವಿಯಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:29
16 ತಿಳಿವುಗಳ ಹೋಲಿಕೆ  

ಅವನ ಶವವನ್ನು ಕಾನಾನ್‍ದೇಶಕ್ಕೆ ಹೊತ್ತುಕೊಂಡುಹೋಗಿ ಮಕ್ಪೇಲ ಎಂಬ ಬೈಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂವಿುಸಹಿತ ಸ್ವಕೀಯ ಶ್ಮಶಾನಭೂವಿುಯಾಗುವದಕ್ಕೆ ಕೊಂಡುಕೊಂಡಿದ್ದನು.


ನಾನು ಪಿತೃಗಳಲ್ಲಿ ಸೇರಿದಾಗ ನನ್ನ ಶವವನ್ನು ಐಗುಪ್ತದೇಶದಿಂದ ತೆಗೆದುಕೊಂಡು ಹೋಗಿ ಆ ಪಿತೃಗಳ ಶ್ಮಶಾನ ಭೂವಿುಯಲ್ಲಿಯೇ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂಬದಾಗಿ ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕೆಂದು ಹೇಳಲು ಅವನು - ನೀನು ಹೇಳಿದಂತೆಯೇ ಮಾಡುತ್ತೇನೆ ಅಂದನು.


ನೀನಂತೂ ಸಮಾಧಾನದೊಡನೆ ಪಿತೃಗಳ ಬಳಿಗೆ ಸೇರುವಿ; ತುಂಬಾ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ


ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರಕೊಂಡುಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ ಎಂದನು.


ಅವನ ಮಕ್ಕಳಾದ ಏಸಾವ ಯಾಕೋಬರು ಅವನಿಗೆ ಸಮಾಧಿಮಾಡಿದರು.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ರೂಪಾಯಿಗಳನ್ನು ಅಬ್ರಹಾಮನು ಸಾಹುಕಾರರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.


ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಭೂವಿುಯು, ಅದಕ್ಕೆ ಸೇರಿದ ಗವಿಯೂ ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿ ಇದ್ದ ಮರಗಳೂ ಸಹಿತವಾಗಿ,


ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು.


ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆಕೊಡುವದನ್ನು ಮುಗಿಸಿದನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟು ಪಿತೃಗಳ ಬಳಿಗೆ ಸೇರಿದನು.


ಅವನ ಭೂವಿುಯ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ಅವನು ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕಾಗಿ ನಿಮ್ಮೆದುರಿನಲ್ಲಿ ಕೊಟ್ಟರೆ ಪೂರ್ಣಕ್ರಯವನ್ನು ಕೊಡುತ್ತೇನೆ ಅಂದನು.


ಹಿತ್ತಿಯರು ಆ ಭೂವಿುಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಶ್ಮಶಾನಭೂವಿುಯಾಗುವದಕ್ಕೆ ಅಬ್ರಹಾಮನಿಗೆ ಕೊಟ್ಟು ನಿರ್ಣಯಿಸಿದರು.


ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೊನೆಂಬ ಕಿರ್ಯತರ್ಬಕ್ಕೆ ಸೇರಿರುವದು; ಅದೇ ಅಬ್ರಹಾಮ್ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು