Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:33 - ಕನ್ನಡ ಸತ್ಯವೇದವು J.V. (BSI)

33 ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆಕೊಡುವದನ್ನು ಮುಗಿಸಿದನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟು ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯಾಕೋಬನು ತನ್ನ ಗಂಡುಮಕ್ಕಳೊಂದಿಗೆ ಮಾತನಾಡಿದ ಮೇಲೆ ತನ್ನ ಹಾಸಿಗೆಯ ಮೇಲೆ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:33
22 ತಿಳಿವುಗಳ ಹೋಲಿಕೆ  

ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ - ನಾನು ನನ್ನ ಪಿತೃಗಳ ಬಳಿಗೆ ಸೇರಬೇಕಾದ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂವಿುಯಲ್ಲಿರುವ ಗವಿಯೊಳಗೆ ನನಗೆ ಪಿತೃಗಳ ಬಳಿಯಲ್ಲಿ ಸಮಾಧಿಮಾಡಬೇಕು.


ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ


ಯೋಸೇಫನು ತೀರಿಹೋಗುವಾಗ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತಾಡಿ ತನ್ನ ಶವವನ್ನು ತಕ್ಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆಕೊಟ್ಟನು.


ಅಲ್ಲಿ ಅವನೂ ನಮ್ಮ ಪಿತೃಗಳೂ ತೀರಿಹೋದರು.


ಒಡೆಯನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ಮನುಷ್ಯನಾದರೋ ಸತ್ತು ಬೋರಲ ಬೀಳುವನು, ಪ್ರಾಣಹೋಗಲು ಅವನು ಎಲ್ಲಿಯೋ!


ಸುಗ್ಗೀಕಾಲದಲ್ಲಿ ತೆನೆಸಿವುಡು [ಮನೆಗೆ] ಸೇರುವಂತೆ ನೀನು ವೃದ್ಧಾಪ್ಯದಲ್ಲಿ ಸಮಾಧಿಗೆ ಸೇರುವಿ.


ಯಾಕೋಬನು ತನ್ನ ಮಕ್ಕಳನ್ನು ಕರಸಿ - ನೀವೆಲ್ಲರೂ ಕೂ ಡಿಬನ್ನಿರಿ; ಮುಂದಿನ ಕಾಲದಲ್ಲಿ ನಿಮಗೆ ಸಂಭವಿಸುವದನ್ನು ತಿಳಿಸುತ್ತೇನೆ.


ಅವನ ಮಕ್ಕಳಾದ ಏಸಾವ ಯಾಕೋಬರು ಅವನಿಗೆ ಸಮಾಧಿಮಾಡಿದರು.


ಇಷ್ಮಾಯೇಲನು ನೂರಮೂವತ್ತೇಳು ವರುಷ ಬದುಕಿದನು; ಆ ವಯಸ್ಸಿನಲ್ಲಿ ಅವನು ಪ್ರಾಣ ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.


ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.


ಹೊಲದ ಕೂಡ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗವಿಯೊಳಗೆ ನನಗೂ ಸಮಾಧಿಮಾಡಬೇಕು ಅಂದನು.


ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.


ಎಲೀಷನು ಮರಣಕರ ರೋಗದಲ್ಲಿ ಬಿದ್ದನು. ಇಸ್ರಾಯೇಲ್ಯರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಬಲಗಳಾಗಿದ್ದವನೇ ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು.


ಎಲೀಷನು ಮೃತಿಹೊಂದಲು ಅವನ ಶವವನ್ನು ಸಮಾಧಿಮಾಡಿದರು. ಮೋವಾಬ್ಯರು ಪ್ರತಿವರುಷದ ಪ್ರಾರಂಭದಲ್ಲಿ ಸುಲಿಗೆ ಮಾಡುವದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು