Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:4 - ಕನ್ನಡ ಸತ್ಯವೇದವು J.V. (BSI)

4 ಆದರೂ ದಡವನ್ನು ಮೀರಿದ ಪ್ರವಾಹದಂತಿರುವ ನೀನು ಇನ್ನು ಪ್ರಮುಖನ ಸ್ಥಾನದಲ್ಲಿ ಇರುವದಿಲ್ಲ. ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ದಡಮೀರಿದ ಪ್ರವಾಹ ನೀನು ಹತ್ತಿದೆ, ಹೊಲೆಮಾಡಿದೆ, ತಂದೆಯ ಹಾಸಿಗೆಯನು ಪ್ರಮುಖಸ್ಥಾನದಲ್ಲಿರೆ ನನ್ನ ಮಂಚವನ್ನೇರಿದೆ ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನೀನು ಪ್ರಳಯದ ಭಯಂಕರವಾದ ಅಲೆಗಳಂತಿರುವೆ. ನೀನು ನನ್ನ ಮಕ್ಕಳಿಗಿಂತ ಅತ್ಯಂತ ಪ್ರಮುಖನಾಗಿರುವುದಿಲ್ಲ. ನಿನ್ನ ತಂದೆಗೆ ಸೇರಿದ ಸ್ತ್ರೀಯೊಂದಿಗೆ ನೀನು ಮಲಗಿಕೊಂಡೆ. ನೀನು ನಿನ್ನ ತಂದೆಯ ಹಾಸಿಗೆಗೆ ಗೌರವವನ್ನು ತೋರಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀರಿನಂತೆ ಚಂಚಲನಾಗಿದ್ದು, ನೀನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆಮಾಡಿದೆ, ನನ್ನ ಹಾಸಿಗೆಯನ್ನು ಏರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:4
11 ತಿಳಿವುಗಳ ಹೋಲಿಕೆ  

ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲನಾಗಿದ್ದರೂ ಅವನು ತನ್ನ ತಂದೆಯ ಹಾಸಿಗೆಯನ್ನು ಹೊಲೆಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


ಅವರು - ಮಲತಾಯಿಯನ್ನು ಸಂಗವಿುಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


[ರೂಬೇನ್ ಕುಲದ ವಿಷಯದಲ್ಲಿ ಹೇಳಿದ್ದೇನಂದರೆ -] ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಮಂದಿಯುಳ್ಳದ್ದಾಗಿರುವದು.


ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.


ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ ಮನೆ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.


ಇಸ್ರಾಯೇಲನೆಂಬ ಯಾಕೋಬನು ತನ್ನ ಮಕ್ಕಳೊಡನೆ ಐಗುಪ್ತದೇಶಕ್ಕೆ ಬಂದಾಗ ಅವನಿಗಿದ್ದ ಸಂತಾನದವರ ವಿವರಣೆ. ಯಾಕೋಬನ ಚೊಚ್ಚಲ ಮಗನು ರೂಬೇನನು.


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಬರೆಯುವಾಗ ಹೀಗೆ ಬೋಧಿಸಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ಮಾತುಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಹೇಗೆ ನಮಗಿರುವ ವಿುಕ್ಕಾದ ಗ್ರಂಥಗಳಿಗೆ ತಪ್ಪಾದ ಅರ್ಥಮಾಡಿಕೊಂಡಿದ್ದಾರೋ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.


ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು