Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:1 - ಕನ್ನಡ ಸತ್ಯವೇದವು J.V. (BSI)

1 ಆದಾಮನ ವಂಶದವರ ಚರಿತ್ರೆಯು - ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದಾಮನ ವಂಶದವರ ದಾಖಲೆಯಿದು: ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ಅವನನ್ನು ತಮ್ಮನ್ನೇ ಹೋಲುವಂತೆ ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:1
15 ತಿಳಿವುಗಳ ಹೋಲಿಕೆ  

ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನೋಡು, ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದನು, ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ; ಇದನ್ನು ಮಾತ್ರ ಕಂಡೆನು.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.


ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು .


ಆದಾಮನ ಸಂತಾನದವರು - ಶೇತ್, ಎನೋಷ್,


ನೋಹನ ಮಕ್ಕಳಾದ ಶೇಮ್ ಹಾಮ್ ಯೆಫೆತರ ವಂಶದವರ ಚರಿತ್ರೆಯು - ಜಲಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.


ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.


ನೋಹನ ಚರಿತ್ರೆಯು - ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ತಪ್ಪಿಲ್ಲದವನೂ ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು