Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:24 - ಕನ್ನಡ ಸತ್ಯವೇದವು J.V. (BSI)

24 ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡದ್ದರಿಂದ ಕಾಣದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರೊಂದಿಗೆ ನಂಬಿಗಸ್ತನಾಗಿ ನಡೆಯುತ್ತಿದ್ದ ಹನೋಕನನ್ನು ದೇವರು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:24
19 ತಿಳಿವುಗಳ ಹೋಲಿಕೆ  

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರುಷ ಬದುಕಿದನು.


ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು.


ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.


ಆಗ ಅವರ ತಂದೆಯಾದ ಯಾಕೋಬನು ಅವರಿಗೆ - ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ; ಬೆನ್ಯಾಮೀನನನ್ನೂ ಕರಕೊಂಡು ಹೋಗಬೇಕೆಂದಿದ್ದೀರಿ, ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂತು ಎಂದು ಹೇಳಲು ರೂಬೇನನು ಅವನಿಗೆ -


ತನ್ನ ಬಟ್ಟೆಗಳನ್ನು ಹರಿದುಕೊಂಡು ತನ್ನ ತಮ್ಮಂದಿರ ಬಳಿಗೆ ಬಂದು - ಆ ಹುಡುಗನು ಇಲ್ಲವಲ್ಲಾ; ಅಯ್ಯೋ, ನಾನೆಲ್ಲಿಗೆ ಹೋಗಲಿ ಎಂದು ಗೋಳಾಡಿದನು.


ಯೆಹೋವನು ಇಂತೆನ್ನುತ್ತಾನೆ - ರಾಮದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಘೋರರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನಹೊಂದಲೊಲ್ಲದೆ ಇದ್ದಾಳೆ.


ಯೆಹೋವನು ಎಲೀಯನನ್ನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಅಳುವಿಕೆಯೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲದೆ ಇದ್ದಳು ಎಂಬದು.


ಇಂಥವರ ವಿಷಯದಲ್ಲೇ ಆದಾಮನಿಗೆ ಏಳನೆಯ ತಲೆಯವನಾದ ಹನೋಕನು - ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು


ಅವನು ಬದುಕಿದ ಕಾಲವೆಲ್ಲಾ ಮುನ್ನೂರ ಅರುವತ್ತೈದು ವರುಷ.


ಮೆತೂಷೆಲಹನು ನೂರ ಎಂಭತ್ತೇಳು ವರುಷದವನಾದಾಗ ಲೆಮೆಕನನ್ನು ಪಡೆದನು.


ನೋಹನ ಚರಿತ್ರೆಯು - ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ತಪ್ಪಿಲ್ಲದವನೂ ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಅವನು ನನಗೆ - ನಾನು ಯೆಹೋವನಿಗೆ ನಡೆದುಕೊಳ್ಳುತ್ತೇನಲ್ಲಾ; ಆತನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನೀನು ನನ್ನ ತಂದೆಯ ಮನೆತನಕ್ಕೆ ಸೇರಿರುವ ಬಂಧುಗಳಲ್ಲಿ ನನ್ನ ಮಗನಿಗೆ ಹೆಣ್ಣು ತೆಗೆದುಕೊಳ್ಳುವಂತೆ ಅನುಕೂಲಮಾಡುವನು.


ಆಗ ಎಲೀಯನು ಅವನಿಗೆ - ನೀನು ದುರ್ಲಭವಾದದ್ದನ್ನು ಕೇಳಿಕೊಂಡಿ; ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ಅದು ದೊರಕುವದು; ಇಲ್ಲವಾದರೆ ದೊರಕುವದಿಲ್ಲ ಅಂದನು.


ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ ಸ್ವೀಕಾರ ಮಾಡುವನು. ಸೆಲಾ.


ನಿನ್ನ ಚಿತ್ತವನ್ನು ತಿಳಿಯಪಡಿಸಿ ನನ್ನನ್ನು ನಡಿಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.


ಎಲೀಷನು ಅದನ್ನು ನೋಡುತ್ತಾ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಗಳಾಗಿದ್ದವನೇ ಎಂದು ಕೂಗಿ ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು