ಆದಿಕಾಂಡ 50:10 - ಕನ್ನಡ ಸತ್ಯವೇದವು J.V. (BSI)10 ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು. ಅಧ್ಯಾಯವನ್ನು ನೋಡಿ |
ಗೋಳಾಡುವ ದಿನಗಳು ಮುಗಿದನಂತರ ಯೋಸೇಫನು ಫರೋಹನ ಮನೆಯವರ ಬಳಿಗೆ ಹೋಗಿ - ನನ್ನ ತಂದೆಯು ತಾನು ಕಾನಾನ್‍ದೇಶದಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿಮಾಡಬೇಕೆಂದು ಸಾಯುವದಕ್ಕಿಂತ ಮೊದಲು ನನ್ನಿಂದ ಪ್ರಮಾಣಮಾಡಿಸಿದನು. ಆದದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿಮಾಡಿ ಬರುವದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ ಅಂದನು.