ಆದಿಕಾಂಡ 50:11 - ಕನ್ನಡ ಸತ್ಯವೇದವು J.V. (BSI)11 ಆ ದೇಶದ ಜನರಾಗಿದ್ದ ಕಾನಾನ್ಯರು ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ - ಐಗುಪ್ತ್ಯರಿಗೆ ಬಂದಿರುವ ಈ ಶೋಕವು ಬಹುವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಆಬೇಲ್‍ಮಿಚ್ರಯೀಮ್ ಎಂದು ಹೆಸರಾಯಿತು. ಇದು ಯೊರ್ದನ್ ಹೊಳೆಯಿಂದ ಆಚೆಯಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ನಾಡಿನ ಜನರಾದ ಕಾನಾನ್ಯರು ಆಟಾದ್ ಕಣದಲ್ಲಿ ನಡೆದ ಶೋಕಾಚರಣೆಯನ್ನು ನೋಡಿ, “ಈಜಿಪ್ಟಿನವರಿಗೆ ಒದಗಿ ಇರುವ ಈ ಶೋಕ ಬಹು ವಿಶೇಷವಾದುದು!” ಎಂದರು. ಈ ಕಾರಣ ಜೋರ್ಡನ್ ನದಿಯಾಚೆ ಇರುವ ಆ ಸ್ಥಳಕ್ಕೆ ‘ಆಬೇಲ್ ಮಿಚ್ರಯೀಮ್’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕಾನಾನಿನ ಜನರು ಗೋರೆನ್‌ಅಟಾದ್‌ನಲ್ಲಿ ಶೋಕಿಸುತ್ತಿರುವವರನ್ನು ನೋಡಿ, “ಈಜಿಪ್ಟಿನವರು ಬಹಳ ದುಃಖಕರವಾದ ಅಂತ್ಯಕ್ರಿಯೆ ಮಾಡುತ್ತಿದ್ದಾರೆ” ಎಂದು ಹೇಳಿದರು. ಆದ್ದರಿಂದ ಆ ಸ್ಥಳಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ಕಂಡಾಗ, “ಇದು ಈಜಿಪ್ಟಿನವರಿಗೆ ಘೋರವಾದ ದುಃಖ,” ಎಂದು ಹೇಳಿದರು. ಆದ್ದರಿಂದ ಅದಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆ ಇದೆ. ಅಧ್ಯಾಯವನ್ನು ನೋಡಿ |