ಆದಿಕಾಂಡ 50:13 - ಕನ್ನಡ ಸತ್ಯವೇದವು J.V. (BSI)13 ಅವನ ಶವವನ್ನು ಕಾನಾನ್‍ದೇಶಕ್ಕೆ ಹೊತ್ತುಕೊಂಡುಹೋಗಿ ಮಕ್ಪೇಲ ಎಂಬ ಬೈಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂವಿುಸಹಿತ ಸ್ವಕೀಯ ಶ್ಮಶಾನಭೂವಿುಯಾಗುವದಕ್ಕೆ ಕೊಂಡುಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವನ ಶವವನ್ನು ಕಾನಾನ್ ನಾಡಿಗೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲು ಇರುವ ಭೂಮಿ ಸಮೇತ, ಸ್ವಂತ ಸ್ಮಶಾನಭೂಮಿಗಾಗಿ ಕೊಂಡುಕೊಂಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನ ಪುತ್ರರು ಅವನನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡುಹೋಗಿ, ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವಂಥ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿದರು. ಅಧ್ಯಾಯವನ್ನು ನೋಡಿ |