Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:18 - ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು - ಇಗೋ, ನಾವು ನಿನಗೆ ಗುಲಾಮರು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದೂ ಅಲ್ಲದೆ, ಅಣ್ಣಂದಿರು ತಾವೇ ಬಂದು ಅವನಿಗೆ ಅಡ್ಡಬಿದ್ದರು. “ಇಗೋ, ನಾವು ನಿನಗೆ ಗುಲಾಮರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸಹೋದರರು ಯೋಸೇಫನ ಬಳಿಗೆ ಹೋಗಿ ಅವನ ಮುಂದೆ ಅಡ್ಡಬಿದ್ದು, “ನಾವು ನಿನ್ನ ಸೇವಕರಾಗಿದ್ದೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಮೇಲೆ ಅವನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದು, “ನಿನ್ನ ದಾಸರಾಗಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:18
8 ತಿಳಿವುಗಳ ಹೋಲಿಕೆ  

ಅವನು ತನ್ನ ಅಣ್ಣಂದಿರಿಗೆ - ನಾನು ಯೋಸೇಫನು; ನನ್ನ ತಂದೆ ಇನ್ನೂ ಇದ್ದಾನೋ ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.


ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನೂ ಅಲ್ಲೇ ಇದ್ದನು.


ಐಗುಪ್ತದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರಿಸುವವನು ಯೋಸೇಫನೇ. ಹೀಗಿರುವದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.


ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ ಅಡ್ಡಬೀಳಿರಿ ಎಂದು ಪ್ರಕಟಣೆಮಾಡಿಸಿ ಅವನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.


ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ; ಆದರೂ ನಮ್ಮ ಅಪರಾಧವನ್ನೂ ಪಾಪವನ್ನೂ ಕ್ಷವಿುಸು ಎಂಬದಾಗಿ ಹೇಳಿಕೊಳ್ಳಬೇಕು; ಹೀಗೆ ಅವನು ಅಪ್ಪಣೆಮಾಡಿದ್ದರಿಂದ ನೀನು ಈಗ ನಿನ್ನ ತಂದೆಯ ದೇವರಿಗೆ ಭಕ್ತರಾಗಿರುವ ನಾವು ಮಾಡಿದ ಅಪರಾಧವನ್ನು ಕ್ಷವಿುಸಬೇಕೆಂದು ಬೇಡಿಕೊಳ್ಳುತ್ತೇವೆಂದು ಹೇಳಿಕಳುಹಿಸಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.


ಯೋಸೇಫನು ಅವರಿಗೆ - ಹೆದರಬೇಡಿರಿ; ನಾನೇನು ದೇವರ ಪ್ರತಿನಿಧಿಯೇ? ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದ್ದಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು