Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:20 - ಕನ್ನಡ ಸತ್ಯವೇದವು J.V. (BSI)

20 ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ನನಗೆ ಕೇಡುಮಾಡಲು ಯೋಚಿಸಿದಿರಿ. ಆದರೆ ದೇವರು ಒಳ್ಳೆಯದನ್ನೇ ಮಾಡಿದನು. ಬಹಳ ಜನರ ಪ್ರಾಣವನ್ನು ಉಳಿಸುವುದಕ್ಕಾಗಿ ನನ್ನನ್ನು ಬಳಸಿಕೊಳ್ಳುವುದು ದೇವರ ಯೋಜನೆಯಾಗಿತ್ತು. ಈಗಲೂ ಆತನದು ಅದೇ ಯೋಜನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:20
15 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಕಷ್ಟಾನುಭವವು ಹಿತಕರವಾಯಿತು; ಅದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.


ಅವನ ಅಣ್ಣತಮ್ಮಂದಿರು - ನಮ್ಮ ತಂದೆ ತನ್ನ ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಾನೆಂದು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತಾಡಲಾರದೆ ಹೋದರು.


ಹಗಲೆಲ್ಲಾ ನನ್ನ ಮಾತುಗಳಿಗೆ ಅಪಾರ್ಥ ಮಾಡುತ್ತಾರೆ; ಅವರು ಬಗೆಯುವದೆಲ್ಲ ನನಗೆ ಕೇಡೇ.


ಅದರ ಅಭಿಪ್ರಾಯವೋ ಹಾಗಲ್ಲ; ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡುವೆನೆಂಬದೇ ಹೊರತು ಈ ಯೋಚನೆಯು ಅದರ ಮನಸ್ಸಿನಲ್ಲಿ ಇಲ್ಲವೇ ಇಲ್ಲ.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಯೆಹೂದನು ತನ್ನ ಅಣ್ಣತಮ್ಮಂದಿರಿಗೆ - ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?


ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ ಬನ್ನಿ; ನಾವು ಅವನ ಮೇಲೆ ಕೈಹಾಕಬಾರದು; ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.


ಯೋಸೇಫನು ಅವರಿಗೆ - ಹೆದರಬೇಡಿರಿ; ನಾನೇನು ದೇವರ ಪ್ರತಿನಿಧಿಯೇ? ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದ್ದಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು