Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:23 - ಕನ್ನಡ ಸತ್ಯವೇದವು J.V. (BSI)

23 ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ನೋಡಿದನು; ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಯೋಸೇಫನು ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಎಫ್ರಯಿಮನ ಮಕ್ಕಳ ಮೊಮ್ಮಕ್ಕಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಜೋಸೆಫನು ಅವರನ್ನೂ ತನ್ನ ಮಡಲಿಗೆ ಬರಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋಸೇಫನು ಜೀವದಿಂದಿದ್ದ ಕಾಲದಲ್ಲಿ, ಎಫ್ರಾಯೀಮನು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದನು. ಅವನ ಮಗನಾದ ಮನಸ್ಸೆಗೆ ಮಾಕೀರನೆಂಬ ಗಂಡುಮಗನು ಹುಟ್ಟಿದನು. ಯೋಸೇಫನು ಮಾಕೀರನ ಮಕ್ಕಳನ್ನೂ ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:23
11 ತಿಳಿವುಗಳ ಹೋಲಿಕೆ  

ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.


ಆಮೇಲೆ ಯೋಬನು ನೂರನಾಲ್ವತ್ತು ವರುಷ ಬಾಳಿ ತನ್ನ ಮಕ್ಕಳನ್ನು ಮೊಮ್ಮಕ್ಕಳನ್ನು ಅಂತು ತನ್ನ ಸಂತಾನದ ನಾಲ್ಕು ತಲೆಗಳನ್ನು ಕಂಡನು.


ಅದಕ್ಕೆ ಆಕೆಯು - ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ; ಅವಳನ್ನು ಕೂಡು; ಅವಳು ಬಸುರಾದರೆ ನನ್ನ ತೊಡೆಯ ಮೇಲೆ ಹೆರಿಸುವೆನು; ಹಾಗೆ ನನಗೂ ಸಂತಾನವಾಗುವದು ಎಂದು ಹೇಳಿ


ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲ್ಯರಿಗೆ ಶುಭವಾಗಲಿ.


ಯೋಸೇಫನ ಚೊಚ್ಚಲಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವಾಸ್ತ್ಯದ ವಿವರ. ಮನಸ್ಸೆಯ ಹಿರೀಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾದದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತಗಳು ಸಿಕ್ಕಿದವು.


ಹೀಗೆ ಮೋಶೆಯು ಗಾದ್ಯರಿಗೂ ರೂಬೇನ್ಯರಿಗೂ ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ ಇವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂವಿುಗಳನ್ನೂ ಕೊಟ್ಟನು.


ಅದರೆ ಅವನ ತಂದೆ ಒಪ್ಪದೆ - ಮಗನೇ, ನಾನು ಬಲ್ಲೆ, ಬಲ್ಲೆ; ಇವನಿಂದಲೂ ಜನಾಂಗವುಂಟಾಗುವದು; ಇವನೂ ಬಲಿಷ್ಠನಾಗುವನು; ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು; ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು ಎಂದು ಹೇಳಿದನು.


ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿಯೇ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿಯೇ ಇರುವವು.


ಹೀಗೆ ಯೋಸೇಫನೂ ಅವನ ತಂದೆಯ ಮನೆಯವರೂ ಐಗುಪ್ತದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರುಷ ಬದುಕಿದನು.


ಮನಸ್ಸೆಯ ಸಂತಾನದವರು - ಮನಸ್ಸೆಯ ಅರಾಮ್ಯಳಾದ ಉಪಪತ್ನಿಯು ಅವನಿಗೆ ಅಷ್ರೀಯೇಲನನ್ನೂ ಮಾಕೀರನನ್ನೂ ಹೆತ್ತಳು; ಮಾಕೀರನು ಗಿಲ್ಯಾದನ ತಂದೆ.


ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ; ಹೆತ್ತವರು ಮಕ್ಕಳಿಗೆ ಭೂಷಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು