Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:24 - ಕನ್ನಡ ಸತ್ಯವೇದವು J.V. (BSI)

24 ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:24
34 ತಿಳಿವುಗಳ ಹೋಲಿಕೆ  

ನಾನು ಅಬ್ರಹಾಮ್ ಇಸಾಕರಿಗೆ ವಾಗ್ದಾನಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು ಎಂದು ಹೇಳಿ


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಇಸ್ರಾಯೇಲನು ಯೋಸೇಫನಿಗೆ - ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ದೇಶಕ್ಕೆ ತಿರಿಗಿ ಬರಮಾಡುವನು.


ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ತಿರಿಗಿ ಕರೆದುಕೊಂಡು ಬರುವೆನು; [ನಿನ್ನ ಅವಸಾನಕಾಲದಲ್ಲಿ] ಯೋಸೇಫನು ನಿನ್ನ ಕಣ್ಣುಗಳ ಮೇಲೆ ಕೈಯಿಡುವನು ಅಂದನು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ಆಮೇಲೆ ಆತನು ಅವನಿಗೆ - ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು -


ನೀನೆದ್ದು ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು ಎಂದು ಹೇಳಿದನು.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಯೋಸೇಫನು ತೀರಿಹೋಗುವಾಗ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತಾಡಿ ತನ್ನ ಶವವನ್ನು ತಕ್ಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆಕೊಟ್ಟನು.


ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,


ಈ ವಿಷಯ ಹೇಗಂದರೆ - ಒಬ್ಬ ಮನುಷ್ಯನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕದೊಳಗೆ ಸೇರಿದವು; ಎಲ್ಲರು ಪಾಪ ಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ಇದಲ್ಲದೆ ಆ ದಿನಗಳಲ್ಲಿ ದಿನ್ನೆ ಕಂಡರೆ ಭಯ, ದಾರಿಯಲ್ಲಿ ಅಪಾಯ; ಬಾದಾವಿುಯ ಮರವು ಹೂಬಿಡುವದು; ವಿುಡತೆಯು ಕೂಡ ಭಾರವಾಗುವದು; ಆಶೆಯು ಕುಂದುವದು, ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವದಕ್ಕಿದ್ದಾನಲ್ಲಾ; ಗೋಳಾಟದವರು ಬೀದಿಯಲ್ಲಿ ತಿರುಗುವರು.


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.


ಐಗುಪ್ತದೇಶದೊಳಗಿಂದ ಬಂದ ಈ ಜನರೊಳಗೆ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದದರಿಂದ ಅವರೊಳಗೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸಿನವರಲ್ಲಿ ಅವರಿಬ್ಬರೇ ಹೊರತಾಗಿ ಒಬ್ಬನಾದರೂ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ನೋಡುವದೇ ಇಲ್ಲ ಎಂದು ಖಂಡಿತವಾಗಿ ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಐಗುಪ್ತದೇಶದಿಂದ ಕರತಂದ ಜನರನ್ನು ನಿನ್ನ ಸಂಗಡ ಕರಕೊಂಡು ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ - ನಿಮ್ಮ ಸಂತತಿಯವರಿಗೆ ಕೊಡುವೆನೆಂದು ಪ್ರಮಾಣ ಮಾಡಿ ಕೊಟ್ಟ ದೇಶಕ್ಕೆ ಹೊರಟುಹೋಗು.


ಯೆಹೋವನು ತಮ್ಮನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತೆಗೆದುಕೊಂಡನೆಂಬದನ್ನು ಇಸ್ರಾಯೇಲ್ಯರು ಕೇಳಿದಾಗ ತಲೆಬಾಗಿ ನಮಸ್ಕರಿಸಿದರು.


ಯೆಹೋವನು ತಾನು ಹೇಳಿದ್ದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.


ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳುಕೊಳ್ಳುವದು ಹೇಗೆ ಎಂದು ಕೇಳಿದನು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಇದಲ್ಲದೆ ಯೋಸೇಫನು ಇಸ್ರಾಯೇಲ್ಯರಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವನಾದದರಿಂದ ನೀವು ಹೋಗುವಾಗ ನನ್ನ ಶವವನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕೆಂದು ಹೇಳಿ ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದದರಿಂದ ಮೋಶೆಯು ಅವನ ಶವವನ್ನು ಸಂಗಡ ತೆಗೆದುಕೊಂಡು ಹೋದನು.


ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವಾಸ್ತ್ಯವಾಯಿತು.


ಇಸ್ರಾಯೇಲನಿಗೆ ಅವಸಾನಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರಸಿ - ನಿನಗೆ ನನ್ನ ಮೇಲೆ ಪ್ರೀತಿಯಿದ್ದರೆ ನೀನು ನಂಬಿಕೆಯಿಂದಲೂ ಪ್ರೀತಿಯಿಂದಲೂ ನನ್ನ ಮಾತನ್ನು ನಡಿಸಬೇಕು; ಏನಂದರೆ, ನನಗೆ ಐಗುಪ್ತ ದೇಶದಲ್ಲಿ ಸಮಾಧಿಮಾಡಬೇಡವೆಂದು ಕೇಳಿಕೊಳ್ಳುತ್ತೇನೆ.


ನಾನೂರಮೂವತ್ತು ವರುಷಗಳು ಕಳೆದನಂತರ ಅದೇ ದಿವಸದಲ್ಲಿ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಟುಹೋದವು.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಸೈನ್ಯ ಸೈನ್ಯವಾಗಿ ಐಗುಪ್ತದೇಶದಿಂದ ಹೊರಗೆ ಬರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು