ಆದಿಕಾಂಡ 50:25 - ಕನ್ನಡ ಸತ್ಯವೇದವು J.V. (BSI)25 ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕೆಂದು ಹೇಳಿ, ಹಾಗೆಯೇ ಮಾಡುತ್ತೇವೆಂಬದಾಗಿ ಅವರಿಂದ ಪ್ರಮಾಣ ಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದೂ ಅಲ್ಲದೆ ಜೋಸೆಫನು ಆ ಇಸ್ರಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾಡಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು,” ಎಂದು ಹೇಳಿ, “ಹಾಗೆಯೇ ಮಾಡುತ್ತೇನೆ,” ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ಪ್ರಮಾಣ ಮಾಡಿ” ಎಂದು ಹೇಳಿ ಅವರಿಂದ ಪ್ರಮಾಣ ಮಾಡಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಶ್ಚಯವಾಗಿ ನಿಮಗೆ ಸಹಾಯ ಮಾಡುವರು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಬೇಕು,” ಎಂದು ಪ್ರಮಾಣ ಮಾಡಿಸಿದನು. ಅಧ್ಯಾಯವನ್ನು ನೋಡಿ |