Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:3 - ಕನ್ನಡ ಸತ್ಯವೇದವು J.V. (BSI)

3 ನಾಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವದರಿಂದ ಅಷ್ಟು ದಿವಸ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತ್ಯರು ಅವನಿಗೋಸ್ಕರ ಎಪ್ಪತ್ತು ದಿನಗಳವರೆಗೂ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪದ್ಧತಿಯ ಪ್ರಕಾರ ನಲವತ್ತು ದಿನಗಳು ಸುಗಂಧ ದ್ರವ್ಯಗಳನ್ನು ಲೇಪಿಸಬೇಕಾಗಿತ್ತು. ಅಷ್ಟು ದಿನಗಳವರೆಗೂ ಅವನಿಗೋಸ್ಕರ ಈಜಿಪ್ಟಿನವರಿಂದ ಶೋಕಾಚರಣೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈಜಿಪ್ಟಿನವರು ಆ ಶರೀರವನ್ನು ವಿಶೇಷವಾದ ರೀತಿಯಲ್ಲಿ ನಲವತ್ತು ದಿನಗಳವರೆಗೆ ಸಿದ್ಧಪಡಿಸಿದರು. ಬಳಿಕ ಈಜಿಪ್ಟಿನವರು ಯಾಕೋಬನಿಗಾಗಿ ಎಪ್ಪತ್ತು ದಿನಗಳವರೆಗೆ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ವೈದ್ಯರು ಇಸ್ರಾಯೇಲನಿಗೆ ನಲವತ್ತು ದಿನಗಳವರೆಗೆ ಸುಗಂಧದ್ರವ್ಯಗಳ ಲೇಪನ ಮಾಡಿದರು. ಅದಕ್ಕಾಗಿ ಅಷ್ಟು ಸಮಯ ಬೇಕಾಗಿತ್ತು. ಇದಲ್ಲದೆ ಈಜಿಪ್ಟಿನವರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:3
5 ತಿಳಿವುಗಳ ಹೋಲಿಕೆ  

ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲ್ಯರು ಮೋಶೆಗೋಸ್ಕರ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.


ಆರೋನನು ಸತ್ತುಹೋದದ್ದನ್ನು ಇಸ್ರಾಯೇಲ್ ಜನಾಂಗದವರೆಲ್ಲರೂ ತಿಳಿದು ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.


ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು ಅವನ ಮನೆಯಲ್ಲಿ ಒಂದು ತಿಂಗಳಿನವರೆಗೆ ತಾಯಿತಂದೆಗಳ ವಿಯೋಗದ ನಿವಿುತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.


ಗೋಳಾಡುವ ದಿನಗಳು ಮುಗಿದನಂತರ ಯೋಸೇಫನು ಫರೋಹನ ಮನೆಯವರ ಬಳಿಗೆ ಹೋಗಿ - ನನ್ನ ತಂದೆಯು ತಾನು ಕಾನಾನ್‍ದೇಶದಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿಮಾಡಬೇಕೆಂದು ಸಾಯುವದಕ್ಕಿಂತ ಮೊದಲು ನನ್ನಿಂದ ಪ್ರಮಾಣಮಾಡಿಸಿದನು. ಆದದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿಮಾಡಿ ಬರುವದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು