Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:4 - ಕನ್ನಡ ಸತ್ಯವೇದವು J.V. (BSI)

4-5 ಗೋಳಾಡುವ ದಿನಗಳು ಮುಗಿದನಂತರ ಯೋಸೇಫನು ಫರೋಹನ ಮನೆಯವರ ಬಳಿಗೆ ಹೋಗಿ - ನನ್ನ ತಂದೆಯು ತಾನು ಕಾನಾನ್‍ದೇಶದಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿಮಾಡಬೇಕೆಂದು ಸಾಯುವದಕ್ಕಿಂತ ಮೊದಲು ನನ್ನಿಂದ ಪ್ರಮಾಣಮಾಡಿಸಿದನು. ಆದದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿಮಾಡಿ ಬರುವದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದುಃಖದ ದಿನಗಳು ಕಳೆದ ನಂತರ ಜೋಸೆಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಪ್ಪತ್ತು ದಿನಗಳಾದ ಮೇಲೆ ಯೋಸೇಫನು ಫರೋಹನ ಅಧಿಕಾರಿಗಳಿಗೆ, “ದಯವಿಟ್ಟು ಇದನ್ನು ಫರೋಹನಿಗೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಆಸ್ಥಾನದವರಿಗೆ, “ನಾನು ನಿಮ್ಮ ಕಣ್ಣುಗಳ ಮುಂದೆ ದಯೆ ಹೊಂದಿದ್ದೇಯಾದರೆ, ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:4
4 ತಿಳಿವುಗಳ ಹೋಲಿಕೆ  

ಅರಮನೆಯ ಹೆಬ್ಬಾಗಲಿನ ಮುಂದೆ ಬಂದನು; ಗೋಣಿತಟ್ಟು ಕಟ್ಟಿಕೊಂಡವರು ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು.


ಬೊಗ್ಗಿ ನಮಸ್ಕರಿಸಿ - ಸ್ವಾವಿು, ದಯವಿರಲಿ; ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.


ನಾಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವದರಿಂದ ಅಷ್ಟು ದಿವಸ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತ್ಯರು ಅವನಿಗೋಸ್ಕರ ಎಪ್ಪತ್ತು ದಿನಗಳವರೆಗೂ ಗೋಳಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು