Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:8 - ಕನ್ನಡ ಸತ್ಯವೇದವು J.V. (BSI)

8 ಐಗುಪ್ತದೇಶದ ಮುಖ್ಯಸ್ಥರೆಲ್ಲರೂ ಯೋಸೇಫನ ಮನೆಯವರೆಲ್ಲರೂ ಅಣ್ಣತಮ್ಮಂದಿರೂ ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜೋಸೆಫನ ಮನೆಯವರೆಲ್ಲರು, ಅಣ್ಣತಮ್ಮಂದಿರು, ತಂದೆಯ ಮನೆಯವರೆಲ್ಲರು ಹೋದರು. ತಮ್ಮ ಮಡದಿಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೋಸೇಫನ ಕುಟುಂಬದಲ್ಲಿದ್ದ ಜನರು ಮತ್ತು ಅವನ ಸಹೋದರರು ಅವನೊಂದಿಗೆ ಹೋದರು. ಅವನ ತಂದೆಯ ಕುಟುಂಬದವರೆಲ್ಲ ಯೋಸೇಫನೊಂದಿಗೆ ಹೋದರು. (ಹೆಂಡತಿ, ಮಕ್ಕಳು ಮತ್ತು ಪ್ರಾಣಿಗಳು ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಉಳಿದುಕೊಂಡರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೋಸೇಫನ ಮನೆಯವರೆಲ್ಲರೂ ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋದರು. ಅವರ ಮಕ್ಕಳನ್ನೂ, ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತದಲ್ಲಿ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:8
5 ತಿಳಿವುಗಳ ಹೋಲಿಕೆ  

ಒಂದು ಗೊರಸೆಯನ್ನಾದರೂ ನಾವು ಬಿಟ್ಟು ಹೋಗುವದಕ್ಕಾಗದು; ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಯಜ್ಞ ಮಾಡಬೇಕಲ್ಲವೇ; ಯಾವ ಪಶುಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವದಕ್ಕೆ ಮುಂಚೆ ನಮಗೆ ತಿಳಿಯದು ಅಂದನು.


ಯೋಸೇಫನು ತಂದೆಗೆ ಸಮಾಧಿಮಾಡುವದಕ್ಕೆ ಹೊರಟುಹೋದಾಗ ಅವನ ಜೊತೆಯಲ್ಲಿ ಫರೋಹನ ಪರಿವಾರದವರೆಲ್ಲರೂ ಅರಮನೆಯ ಮುಖಂಡರೆಲ್ಲರೂ


ಇದಲ್ಲದೆ ಅವನ ಸಂಗಡ ರಥಗಳೂ ಕುದುರೆಗಳೂ ಸಹ ಹೋದವು. ಹೊರಟುಹೋದವರು ಬಹು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು