Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:12 - ಕನ್ನಡ ಸತ್ಯವೇದವು J.V. (BSI)

12 ದೇವರು ಲೋಕವನ್ನು ನೋಡಿದಾಗ ಅದು ಕೆಟ್ಟುಹೋಗಿತ್ತು; ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ಭೂಮಿಯನ್ನು ನೋಡಲಾಗಿ ಅದು ಕೆಟ್ಟುಹೋಗಿತ್ತು, ಮನುಷ್ಯರೆಲ್ಲರೂ ಭೂಮಿಯ ಮೇಲೆ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:12
18 ತಿಳಿವುಗಳ ಹೋಲಿಕೆ  

ಆತನು ಭಕ್ತಿಹೀನರಾದ ಪುರಾತನರ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಲಯವನ್ನು ಬರಮಾಡಿದನು; ಆದರೆ ಸುನೀತಿಯನ್ನು ಸಾರುವವನಾಗಿದ್ದ ನೋಹನನ್ನೂ ಅವನೊಂದಿಗೆ ಬೇರೆ ಏಳು ಮಂದಿಯನ್ನೂ ಉಳಿಸಿದನು.


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು.


ಅವನು ಮನುಷ್ಯರ ಮುಂದೆ ನಿಂತು - ನಾನು ಪಾಪಮಾಡಿ ನ್ಯಾಯವನ್ನು ಕೆಡಿಸಿದ್ದರೂ ಆತನು ಮುಯ್ಯಿ ತೀರಿಸದೆ


ಆಗ ಯೆಹೋವನು ನೋಹನಿಗೆ - ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿನವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿ ನಡೆಯುವದನ್ನು ನೋಡಿದ್ದೇನೆ.


ಆದರೆ ನೋಹನಿಗೆ ಯೆಹೋವನ ದಯವು ದೊರಕಿತು.


ನಾನು ಇಳಿದು ಹೋಗಿ ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುತ್ತೇನೆ ಅಂದನು.


ದೇವರು ಮತ್ತೂ ಹೇಳಿದ್ದೇನಂದರೆ - ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ಎಲ್ಲಾ ತಲತಲಾಂತರಗಳಲ್ಲಿಯೂ ಮಾಡುವ ಈ ಪ್ರತಿಜ್ಞೆಗೆ


ಪಶುಪಕ್ಷಿ ಮೃಗಕ್ರಿವಿುಗಳು ಮನುಷ್ಯರು ಸಹಿತವಾಗಿ ಭೂವಿುಯ ಮೇಲೆ ಸಂಚರಿಸುವ ಸಕಲ ಪ್ರಾಣಿಗಳೂ ಲಯವಾದವು.


ಆಗ ದೇವರು ನೋಹನಿಗೆ - ಎಲ್ಲಾ ದೇಹಿಗಳಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅವರ ಅನ್ಯಾಯದಿಂದ ತುಂಬಿ ಅದೆ; ನಾನು ಅವರನ್ನೂ ಭೂವಿುಯ ಮೇಲಿರುವದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಇದಲ್ಲದೆ ಯೆಹೋವನು - ಸೊದೋಮ್ ಗೊಮೋರಗಳ ವಿಷಯವಾಗಿ ಎಷ್ಟೋ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು