Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:14 - ಕನ್ನಡ ಸತ್ಯವೇದವು J.V. (BSI)

14 ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ವಿಧವಾದ ಮೃಗ ಪಶು ಕ್ರಿವಿುಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರೊಂದಿಗೆ ಸಕಲ ವಿಧವಾದ ಕಾಡುಮೃಗಗಳೂ ಸಾಕು ಪ್ರಾಣಿಗಳೂ ಕ್ರಿಮಿಕೀಟಗಳೂ ರೆಕ್ಕೆಬಡಿಯುವ ಹಕ್ಕಿಪಕ್ಷಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ನಾವೆಯೊಳಗೆ ಇದ್ದರು. ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪ್ರಾಣಿಗಳು, ಪ್ರತಿಯೊಂದು ಬಗೆಯ ಪಶುಗಳು, ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಬಗೆಯ ಕ್ರಿಮಿಗಳು ಮತ್ತು ಪ್ರತಿಯೊಂದು ಬಗೆಯ ಪಕ್ಷಿಗಳು ನಾವೆಯೊಳಗೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ತಮ್ಮ ತಮ್ಮ ಜಾತಿಗನುಸಾರವಾಗಿ ಎಲ್ಲಾ ಕಾಡು ಮೃಗಗಳೂ ಎಲ್ಲಾ ಪಶುಗಳೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳೂ ಎಲ್ಲಾ ಪಕ್ಷಿಗಳೂ ಎಲ್ಲಾ ವಿಧವಾದ ರೆಕ್ಕೆಯಿರುವ ಜೀವಿಗಳೂ ಪ್ರವೇಶಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:14
7 ತಿಳಿವುಗಳ ಹೋಲಿಕೆ  

ಹೀಗೆ ದೇವರು ಮಹಾಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.


ಮತ್ತು ದೇವರು - ಭೂವಿುಯಿಂದ ಜೀವಜಂತುಗಳು ಉಂಟಾಗಲಿ; ಪಶುಕ್ರಿವಿುಗಳೂ ಕಾಡುಮೃಗಗಳೂ ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ ಅಂದನು; ಹಾಗೆಯೇ ಆಯಿತು.


ಇದಲ್ಲದೆ ಜೀವಿಗಳ ಪ್ರತಿಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ ನಿನ್ನೊಂದಿಗೆ ಉಳಿಸಿ ಕಾಪಾಡಬೇಕು.


ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳೂ ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.


ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು