ಆದಿಕಾಂಡ 7:23 - ಕನ್ನಡ ಸತ್ಯವೇದವು J.V. (BSI)23 ಮನುಷ್ಯರು ಮೊದಲುಗೊಂಡು ಪಶುಪಕ್ಷಿಕ್ರಿವಿುಗಳವರೆಗೂ ಭೂವಿುಯ ಮೇಲಿದ್ದದ್ದೆಲ್ಲಾ ನಾಶವಾಯಿತು; ಅವು ಭೂವಿುಯ ಮೇಲಿನಿಂದ ಲಯವಾಗಿ ಹೋದವು. ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೀಗೆ ಮನುಷ್ಯರು, ಪಶುಪಕ್ಷಿ, ಕ್ರಿಮಿಕೀಟಗಳು, ಭೂಮಿಯ ಮೇಲಿದ್ದ ಎಲ್ಲಾ ಜೀವರಾಶಿಗಳೂ ನಾಶವಾಯಿತು. ಅವು ಭೂಮಿಯ ಮೇಲಿಂದ ಅಳಿದುಹೋದವು. ನೋಹನು ಮತ್ತು ಅವನ ಸಂಗಡ ನಾವೆಯಲ್ಲಿದ್ದವರು ಮಾತ್ರ ಜೀವಂತವಾಗಿ ಉಳಿದರು. ಅಧ್ಯಾಯವನ್ನು ನೋಡಿ |