Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:4 - ಕನ್ನಡ ಸತ್ಯವೇದವು J.V. (BSI)

4 ಏಳುದಿನಗಳ ನಂತರ ನಾನು ಭೂವಿುಯ ಮೇಲೆ ನಾಲ್ವತ್ತು ದಿವಸ ಹಗಲಿರುಳು ಮಳೆಯನ್ನು ಸುರಿಸಿ ನನ್ನಿಂದಾದ ಜೀವರಾಶಿಗಳನ್ನೆಲ್ಲಾ ಭೂವಿುಯ ಮೇಲಿನಿಂದ ಅಳಿಸಿಬಿಡುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಳು ದಿನಗಳಾನಂತರ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳೆನ್ನದೆ ಮಳೆ ಸುರಿಸುವೆನು; ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲ ಭೂಮಿಯಿಂದ ಅಳಿಸಿಹಾಕುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಳು ದಿವಸಗಳಾದ ಮೇಲೆ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳು ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಪ್ರತಿಯೊಂದು ಜೀವರಾಶಿಯನ್ನೂ ಭೂಮಿಯ ಮೇಲಿಂದ ಅಳಿಸಿಬಿಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:4
23 ತಿಳಿವುಗಳ ಹೋಲಿಕೆ  

ಜಲಪ್ರಳಯವು ನಾಲ್ವತ್ತು ದಿನ ಭೂವಿುಯ ಮೇಲೆ ಇದ್ದು ನೀರು ಹೆಚ್ಚುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲಾಡಿತು.


ನಾಲ್ವತ್ತು ದಿನವೂ ಹಗಲಿರುಳು ಭೂವಿುಯ ಮೇಲೆ ದೊಡ್ಡ ಮಳೆ ಸುರಿಯಿತು.


ನಾನಂತೂ ಭೂವಿುಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವೆನು; ಭೂವಿುಯಲ್ಲಿರುವ ಸಮಸ್ತವೂ ಲಯವಾಗುವದು.


ಆಗ ದೇವರು ನೋಹನಿಗೆ - ಎಲ್ಲಾ ದೇಹಿಗಳಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅವರ ಅನ್ಯಾಯದಿಂದ ತುಂಬಿ ಅದೆ; ನಾನು ಅವರನ್ನೂ ಭೂವಿುಯ ಮೇಲಿರುವದೆಲ್ಲವನ್ನೂ ಅಳಿಸಿಬಿಡುತ್ತೇನೆ.


ಮತ್ತು ಯೆಹೋವನು - ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂವಿುಯ ಮೇಲಿನಿಂದ ಅಳಿಸಿಬಿಡುವೆನು; ಅದನ್ನು ಉಂಟುಮಾಡಿದ್ದಕ್ಕೆ ನನ್ನಲ್ಲಿ ಪಶ್ಚಾತ್ತಾಪ ಹುಟ್ಟಿತು; ಮನುಷ್ಯರೊಂದಿಗೆ ಸಕಲಮೃಗ ಕ್ರಿವಿುಪಕ್ಷಿಗಳನ್ನೂ ಅಳಿಸಿ ಬಿಡುವೆನು ಅಂದುಕೊಂಡನು.


ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆಯಲ್ಪಡಲಿ; ಸದ್ಭಕ್ತರ ಹೆಸರಿನ ಸಂಗಡ ಅವರದು ಬರೆಯಲ್ಪಡದಿರಲಿ.


ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು.


ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ ನಿಮಗೆ ಮಳೆಯನ್ನು ತಡೆದೆನು; ಒಂದು ಊರಿನ ಮೇಲೆ ಮಳೆಯಾಗುವಂತೆಯೂ ಇನ್ನೊಂದು ಊರಿನ ಮೇಲೆ ಮಳೆಯಾಗದಂತೆಯೂ ಮಾಡಿದೆನು; ಒಬ್ಬನ ಹೊಲದಲ್ಲಿ ಮಳೆಯಾಯಿತು, ಮಳೆಯಾಗದ ಹೊಲವು ಬಾಡಿಹೋಯಿತು.


ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇವಿುಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿ


ಅಕಾಲಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.


ಮತ್ತೇಳು ದಿವಸದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ತಿರಿಗಿ ಬರಲೇ ಇಲ್ಲ.


ಆ ಏಳು ದಿವಸಗಳಾದನಂತರ ಜಲಪ್ರಳಯವು ಭೂವಿುಯ ಮೇಲೆ ಬಂತು.


ಅವನು ಇನ್ನೂ ಏಳು ದಿವಸ ತಡೆದು ಪಾರಿವಾಳವನ್ನು ತಿರಿಗಿ ಹೊರಕ್ಕೆ ಬಿಟ್ಟನು.


ಆಗ ಯೆಹೋವನು - ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿರುವದಿಲ್ಲ; ಅವರು ಭ್ರಷ್ಟರಾದದರಿಂದ ಮರ್ತ್ಯರೇ. ಅವರ ಆಯುಷ್ಯವು ನೂರ ಇಪ್ಪತ್ತು ವರುಷವಾಗಿರಲಿ ಅಂದನು.


ಯೆಹೋವದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ಗಿಡವಾದರೂ ಭೂವಿುಯಲ್ಲಿ ಇರಲಿಲ್ಲ, ಯಾವ ಪಲ್ಯವೂ ಹುಟ್ಟಿರಲಿಲ್ಲ. ಯಾಕಂದರೆ ಯೆಹೋವದೇವರು ಭೂವಿುಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ; ಭೂವಿುಯನ್ನು ವ್ಯವಸಾಯ ಮಾಡುವದಕ್ಕೆ ಮನುಷ್ಯನೂ ಇರಲಿಲ್ಲ.


ಪಕ್ಷಿಗಳಲ್ಲಿಯೂ ಏಳೇಳು ಗಂಡುಹೆಣ್ಣುಗಳನ್ನು ತೆಗೆದುಕೋ. ಹೀಗೆ ಆಯಾ ಜಾತಿಯನ್ನು ಭೂವಿುಯ ಮೇಲೆ ಉಳಿಸಿ ಕಾಪಾಡಬೇಕು.


ಭೂವಿುಯ ಕೆಳಗಿರುವ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಹೋದವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಗ ಭೂವಿುಯ ಮೇಲಿದ್ದ ನೀರು ಕ್ರಮವಾಗಿ ತಗ್ಗುತ್ತಾ ಬಂತು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನಿನ್ನನ್ನು ಭೂವಿುಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರುಷ ಸಾಯುವಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು