Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:7 - ಕನ್ನಡ ಸತ್ಯವೇದವು J.V. (BSI)

7 ಆಗ ನೋಹನು ಪ್ರಳಯವನ್ನು ತಪ್ಪಿಸಿಕೊಳ್ಳುವದಕ್ಕೆ ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಮಡದಿ, ಮಕ್ಕಳು, ಸೊಸೆಯರ ಸಮೇತ ನಾವೆಯನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಹೆಂಡತಿ, ತನ್ನ ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನೋಹನು ಪ್ರಳಯದ ನಿಮಿತ್ತವಾಗಿ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯಲ್ಲಿ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:7
10 ತಿಳಿವುಗಳ ಹೋಲಿಕೆ  

ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಲಯವು ಬಂದು ಎಲ್ಲರನ್ನು ನಾಶಮಾಡಿತು.


ಆತನು ಭಕ್ತಿಹೀನರಾದ ಪುರಾತನರ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಲಯವನ್ನು ಬರಮಾಡಿದನು; ಆದರೆ ಸುನೀತಿಯನ್ನು ಸಾರುವವನಾಗಿದ್ದ ನೋಹನನ್ನೂ ಅವನೊಂದಿಗೆ ಬೇರೆ ಏಳು ಮಂದಿಯನ್ನೂ ಉಳಿಸಿದನು.


ಹೇಗಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಉಣ್ಣುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದು


ಆಗ ಯೆಹೋವನು ನೋಹನಿಗೆ - ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿನವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿ ನಡೆಯುವದನ್ನು ನೋಡಿದ್ದೇನೆ.


ಆದರೆ ನಿನ್ನ ಕೂಡ ನನ್ನ ನಿಬಂಧನೆಯನ್ನು ಮಾಡುತ್ತೇನೆ. ನೀನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟಿಸುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಆತನಿಗೆ ಅವಿಧೇಯರಾಗಿದ್ದವರ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ಸೇರಿ ನೀರಿನ ಮೂಲಕ ರಕ್ಷಣೆಹೊಂದಿದರು.


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು