Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:1 - ಕನ್ನಡ ಸತ್ಯವೇದವು J.V. (BSI)

1 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:1
35 ತಿಳಿವುಗಳ ಹೋಲಿಕೆ  

ಆಮೇಲೆ ದೇವರು ರಾಹೇಲಳನ್ನು ನೆನಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.


ದೇವರು ಆ ಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನು ಕೆಡವಿದರೂ ಅಬ್ರಹಾಮನನ್ನು ನೆನಸಿ ಲೋಟನನ್ನು ತಪ್ಪಿಸಿ ಕಾಪಾಡಿದನು.


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು


ನಾವು ದೀನಾವಸ್ಥೆಯಲ್ಲಿದ್ದಾಗ ನಮ್ಮನ್ನು ನೆನಪುಮಾಡಿಕೊಂಡನು; ಆತನ ಕೃಪೆಯು ಶಾಶ್ವತವಾದದ್ದು.


ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.


ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ - ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವದನ್ನೂ ಎಂದಿಗೂ ಮರೆತುಬಿಡೆನು.


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಯೆಹೋವನೇ, ಎದೋಮ್ಯರ ಹಾನಿಗಾಗಿ ಯೆರೂಸಲೇವಿುನ ನಾಶನದಿನವನ್ನು ನೆನಪುಮಾಡಿಕೋ. ಅವರು - ಅದನ್ನು ಹಾಳುಮಾಡಿರಿ, ಅಸ್ತಿವಾರಸಹಿತ ಹಾಳುಮಾಡಿರಿ ಎಂದು ಹೇಳಿದರಲ್ಲಾ.


ಯೆಹೋವನೇ, ದಾವೀದನ ಹಿತಕ್ಕೋಸ್ಕರ ಅವನ ಶ್ರಮಗಳನ್ನು ನೆನಪುಮಾಡಿಕೋ.


ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.


ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ; ಇದನ್ನು ನೆನಪು ಮಾಡಿಕೋ.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ.


ಅವಳ ಪಾಪಗಳು ಒಂದರ ಮೇಲೊಂದು ಸೇರಿ ಆಕಾಶದ ಪರ್ಯಂತರಕ್ಕೂ ಬೆಳೆದವೆ. ದೇವರು ಅವಳ ಅನ್ಯಾಯಗಳನ್ನು ಜ್ಞಾಪಿಸಿಕೊಂಡನು.


ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.


ಬಡಗಣಗಾಳಿ ಮಳೆ ಬರಮಾಡುವದು; ಚಾಡಿಯ ನಾಲಿಗೆ ಕೋಪದ ಮುಖ ಮಾಡುವದು.


ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು ನಿನ್ನ ಕೋಪವು ಇಳಿಯುವ ಪರ್ಯಂತ ನನ್ನನ್ನು ಮರೆಮಾಡಿ ನನಗೆ ಅವಧಿಯನ್ನು ಗೊತ್ತುಮಾಡಿ [ಕಡೆಯಲ್ಲಿ] ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!


ಯೆಹೋವನ ದೂತನು - ನೀನು ಮೂರು ಸಾರಿಗೂ ನಿನ್ನ ಕತ್ತೆಯನ್ನು ಹೊಡೆದದ್ದೇಕೆ; ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದದ್ದರಿಂದ ನಿನ್ನನ್ನು ತಡೆಯುವದಕ್ಕೆ ನಾನೇ ಬಂದಿದ್ದೇನೆ.


ಇಂಥ ಗಿಡಕ್ಕಾಗಿ ನೀನು ಕನಿಕರಪಟ್ಟಿರುವಲ್ಲಿ ಎಡಗೈ ಬಲಗೈ ತಿಳಿಯದ ಒಂದು ಲಕ್ಷ ಇಪ್ಪತ್ತು ಸಾವಿರ ನರಪ್ರಾಣಿಗಳೂ ಬಹು ಪಶುಗಳೂ ಉಳ್ಳ ಆ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ ಅಂದನು.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.


ಆದರೆ ನೀನು ಉಸುರುಗಾಳಿಯಿಂದ ಊದಲು ಸಮುದ್ರವು ಅವರನ್ನು ಮುಚ್ಚಿತು, ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.


ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ಬಿಡಿಸುವನು.


ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಒಣಗುತ್ತವೆ; ಬಿಟ್ಟರೆ ಭೂವಿುಯನ್ನು ಹಾಳುಮಾಡುತ್ತವೆ.


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿದ್ದನು; ಆತನು ಸದಾಕಾಲವೂ ಅರಸನಾಗಿ ಕೂತಿರುವನು.


ಹೀಗೆ ಆತನು ತನ್ನ ಪರಿಶುದ್ಧವಚನವನ್ನೂ ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ಜಲರಾಶಿಗೆ - ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು ಎಂದು ನಾನು ಅಪ್ಪಣೆಕೊಡುವವನಾಗಿದ್ದೇನೆ;


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ.


ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪಶುಪಕ್ಷಿಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಸ್ಥಿರಪ್ರತಿಜ್ಞೆ ಮಾಡುತ್ತೇನೆ;


ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ಪರ್ಯಂತರ ಎಲ್ಲರನ್ನೂ ಆಶೀರ್ವದಿಸುವನು.


ಬೇಗೆಯು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ಅಕಟವಿಕಟ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;


ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್‍ನದಿಯೆಲ್ಲಾ ತಳದ ತನಕ ಒಣಗುವದು, ಅಶ್ಶೂರದ ಗರ್ವವು ತಗ್ಗಿಸಲ್ಪಡುವದು, ಐಗುಪ್ತದ ರಾಜದಂಡವು ತಪ್ಪಿಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು