Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:2 - ಕನ್ನಡ ಸತ್ಯವೇದವು J.V. (BSI)

2 ಭೂವಿುಯ ಕೆಳಗಿರುವ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಹೋದವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಗ ಭೂವಿುಯ ಮೇಲಿದ್ದ ನೀರು ಕ್ರಮವಾಗಿ ತಗ್ಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಭೂಮಿಯ ಅಡಿಸಾಗರದ ಸೆಲೆಗಳು ಹಾಗೂ ಆಕಾಶದ ತೂಬುಗಳು ಮುಚ್ಚಿಹೋದವು; ಸುರಿಯುತ್ತಿದ್ದ ಮಳೆ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಕಾಶದ ತೂಬುಗಳು ಮುಚ್ಚಿಹೋದವು. ಭೂಸೆಲೆಗಳಿಂದ ಉಕ್ಕುತ್ತಿದ್ದ ನೀರು ಸಹ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮಾತ್ರವಲ್ಲದೆ ಸಾಗರದ ಸೆಲೆಗಳೂ, ಆಕಾಶದ ದ್ವಾರಗಳೂ ಮುಚ್ಚಿಹೋದವು. ಆಕಾಶದಿಂದ ಬೀಳುವ ಮಳೆ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:2
10 ತಿಳಿವುಗಳ ಹೋಲಿಕೆ  

ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂವಿುಯ ಕೆಳಗಿರುವ ಸಾಗರದ ಸೆಲೆಗಳು ಒಡೆದವು; ಆಕಾಶದ ತೂಬುಗಳು ತೆರೆದವು.


ಆತನು ಗಗನವನ್ನು ಮೇಲೆ ಸ್ಥಿರಪಡಿಸಿ ಸಾಗರದ ಸೆಲೆಗಳನ್ನು ನೆಲೆಗೊಳಿಸಿ


ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಅಂದನು.


ನನ್ನನ್ನು ಸಮುದ್ರದ ಉದರದಲ್ಲಿ, ಅಗಾಧಸ್ಥಳದಲ್ಲಿ ಎಸೆದುಬಿಟ್ಟಿಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ನಿನ್ನ ಅಲೆಗಳೂ ತೆರೆಗಳೂ ನನ್ನ ಮೇಲ್ಗಡೆ ಹಾದುಹೋಗುತ್ತಿದ್ದವು.


ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? ಆಕಾಶದಲ್ಲಿನ ಬುದ್ದಲಿಗಳನ್ನು ಮೊಗಚಿಹಾಕಿ


ಏಳುದಿನಗಳ ನಂತರ ನಾನು ಭೂವಿುಯ ಮೇಲೆ ನಾಲ್ವತ್ತು ದಿವಸ ಹಗಲಿರುಳು ಮಳೆಯನ್ನು ಸುರಿಸಿ ನನ್ನಿಂದಾದ ಜೀವರಾಶಿಗಳನ್ನೆಲ್ಲಾ ಭೂವಿುಯ ಮೇಲಿನಿಂದ ಅಳಿಸಿಬಿಡುತ್ತೇನೆ ಎಂದು ಹೇಳಿದನು.


ನಾಲ್ವತ್ತು ದಿನವೂ ಹಗಲಿರುಳು ಭೂವಿುಯ ಮೇಲೆ ದೊಡ್ಡ ಮಳೆ ಸುರಿಯಿತು.


ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂವಿುಯ ಕೆಳಗಣ ಸಾಗರದ ಗುಪ್ತಪ್ರದೇಶಗಳಲ್ಲಿ ತಿರುಗಾಡಿದ್ದೀಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು