ಆದಿಕಾಂಡ 8:20 - ಕನ್ನಡ ಸತ್ಯವೇದವು J.V. (BSI)20 ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಮಾಡಿ ಅದರ ಮೇಲೆ ಶುದ್ಧವಾದ ಎಲ್ಲಾ ಪಶುಪಕ್ಷಿಜಾತಿಗಳಲ್ಲಿ ಸರ್ವಾಂಗಹೋಮ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |