Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:22 - ಕನ್ನಡ ಸತ್ಯವೇದವು J.V. (BSI)

22 ಭೂವಿುಯು ಇರುವ ತನಕ ಬಿತ್ತನೆಯೂ ಕೊಯಿಲೂ, ಚಳಿಯೂ ಸೆಕೆಯೂ, ಬೇಸಿಗೆಕಾಲವೂ ಹಿಮಕಾಲವೂ, ಹಗಲೂ ಇರುಳೂ ಇವುಗಳ ಕ್ರಮ ತಪ್ಪುವದೇ ಇಲ್ಲ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ; ತಂಪೂ ಸೆಕೆಯೂ; ಬೇಸಿಗೆಯೂ ಹಿಮಕಾಲವೂ; ಹಗಲೂ ರಾತ್ರಿಯೂ ನಿಂತುಹೋಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:22
9 ತಿಳಿವುಗಳ ಹೋಲಿಕೆ  

ಸಹೋದರರೇ, ಕರ್ತನು ಪ್ರತ್ಯಕ್ಷನಾಗುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂವಿುಯ ಬೆಲೆಯುಳ್ಳ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.


ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ ಸುಗ್ಗಿಯ ಕ್ಲುಪ್ತವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ ಎಂದು ಮನದಲ್ಲಿ ಅಂದುಕೊಳ್ಳುವದಿಲ್ಲ.


ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇವಿುಸುವಾತನೂ ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ -


ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಉಳುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.


ದೇಶಕ್ಕೆ ಬರಬಂದು ಎರಡು ವರುಷವಾಗಿದೆಯಷ್ಟೆ; ಇನ್ನೂ ಐದು ವರುಷಗಳ ಪರ್ಯಂತರ ಬಿತ್ತುವದಕ್ಕಾಗಲಿ ಕೊಯ್ಯುವದಕ್ಕಾಗಲಿ ಅವಕಾಶವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು