Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:12 - ಕನ್ನಡ ಸತ್ಯವೇದವು J.V. (BSI)

12 ದೇವರು ಮತ್ತೂ ಹೇಳಿದ್ದೇನಂದರೆ - ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ಎಲ್ಲಾ ತಲತಲಾಂತರಗಳಲ್ಲಿಯೂ ಮಾಡುವ ಈ ಪ್ರತಿಜ್ಞೆಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೇವರು ಮತ್ತೆ ಹೇಳಿದ್ದೇನೆಂದರೆ - “ನಾನು ನಿಮ್ಮನ್ನೂ ನಿಮ್ಮ ಸಂಗಡವಿರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಿಗೆ ಮಾಡುವ ಈ ಪ್ರತಿಜ್ಞೆಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಈ ಗುರುತು ತೋರಿಸುತ್ತದೆ. ಈ ಗುರುತು ಯಾವಾಗಲೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ಮತ್ತೆ ಹೇಳಿದ್ದೇನೆಂದರೆ, “ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳವರೆಗೆ ನಾನು ಮಾಡುವ ಒಡಂಬಡಿಕೆಗೆ ಗುರುತು ಇದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:12
8 ತಿಳಿವುಗಳ ಹೋಲಿಕೆ  

ನೀವು ಮಾನಸ್ಥಾನದಲ್ಲಿ ಸುನ್ನತಿ ಮಾಡಿಸಿಕೊಳ್ಳಬೇಕು; ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತು.


[ನೀವು ಬಾಗಲಿಗೆ ಹಚ್ಚಿದ] ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವದಾದ ಕಾರಣ ನಾನು ಅದನ್ನು ಕಂಡು ನಿಮಗೆ ಯಾವ ನಷ್ಟವನ್ನೂ ಮಾಡದೆ ಮುಂದಕ್ಕೆ ದಾಟಿ ಹೋಗುವೆನು. ನಾನು ಐಗುಪ್ತದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವದಿಲ್ಲ.


ಯೆಹೋವನು ಭುಜಬಲದಿಂದ ನಮ್ಮನ್ನು ಐಗುಪ್ತದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವದಕ್ಕೆ ಈ ಪದ್ಧತಿಯು ಕೈಗೆ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಮತ್ತು ದೇವರು ನೋಹನಿಗೆ - ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು ಎಂದು ಹೇಳಿದನು.


ಆದದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತು ಕೊಟ್ಟು ನಾನು ನಿಮಗೆ ದಯೆತೋರಿಸಿದಂತೆ ನೀವೂ ನನ್ನ ತಂದೆಯ ಮನೆಯವರಿಗೆ ದಯೆತೋರಿಸುವದಾಗಿಯೂ


ಮೇಘಗಳಲ್ಲಿ ನಾನಿಟ್ಟಿರುವ ಮುಗಿಲುಬಿಲ್ಲೇ ಗುರುತಾಗಿರುವದು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು